ಕ್ರಿಕೆಟ್

ಬೆಂಗಳೂರು ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ...

ಬೆಂಗಳೂರು ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ
ಟೀಂ ಇಂಡಿಯಾ
Published On :
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಗೆಲ್ಲಲು 188 ರನ್ ಗಳ ಗುರಿ ಪಡೆದಿದ್ದ ಆಸ್ಟ್ರೇಲಿಯಾವನ್ನು 112 ರನ್ ಗಳಿಗೆ ಆಲೌಟ್ ಮಾಡಿದ 75 ರನ್ ಗಳ ಅಂತರದಿಂದ ಜಯಗಳಿಸಿದೆ. 
ಟಾಸ್ ಗೆದ್ದು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 189 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಇನ್ನಿಂಗ್ಸ್ ಪ್ರಾರಂಭಿಸಿದ್ದ ಆಸ್ಟ್ರೇಲಿಯಾ 276 ರನ್ ಗಳಿಗೆ ಆಲೌಟ್ ಆಗಿ 87 ರನ್ ಮುನ್ನಡೆ ಸಾಧಿಸಿತ್ತು. ನಂತರ ಬ್ಯಾಟ್ ಮಾಡಿದ ಭಾರತ ಎಚ್ಚರಿಕೆಯ ಬ್ಯಾಟಿಂಗ್ ಮಾಡಿ 274 ರನ್ ಗಳಿಸಿತು. ಇದರೊಂದಿಗೆ ಭಾರತ ಆಸ್ಟ್ರೇಲಿಯಾಗೆ 188 ರನ್ ಗಳ ಗುರಿ ನೀಡಿತು ಇದನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 112 ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ ಶರಣಾಯಿತು. 

ಆರ್ ಅಶ್ವಿನ್ ಅವರ ಮಾರಕ ದಾಳಿಗೆ ಆಸ್ಟ್ರೇಲಿಯಾ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ಅಶ್ವಿನ್ 41 ರನ್ ಗಳನ್ನು ನೀಡಿ 6 ವಿಕೆಟ್ ಪಡೆದಿದ್ದಾರೆ. 

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.