ಮತ್ತೆ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಎಬಿಡಿ ವಿಲಿಯರ್ಸ್
ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಎಬಿಡಿ ವಿಲಿಯರ್ಸ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ...

Published On :
ದುಬೈ: ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಎಬಿಡಿ ವಿಲಿಯರ್ಸ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯಧಿಕ ರನ್ ಗಳಿಸಿದ್ದ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ನೂತನ ಏಕದಿನ ಕ್ರಿಕೆಟ್ ನಲ್ಲಿ 10ನೇ ಬಾರಿಗೆ ಅಗ್ರಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನ ಅಲಂಕರಿಸಿದ್ದರು. ಇದೀಗ ಎಬಿಡಿ ವಿಲಿಯರ್ಸ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 262 ರನ್ ಗಳಿಸಿ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ವಾರ್ನರ್ ಎರಡನೇ ಸ್ಥಾನಕ್ಕೆ ಕುಸಿದಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನ ಕುಸಿದಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಬ್ಯಾಟ್ಸ್ ಮನ್ ಪಟ್ಟಿಯಲ್ಲಿ ಎಬಿಡಿ ವಿಲಿಯರ್ಸ್ 875 ಅಂಕ ಗಳಿಸಿದ್ದಾರೆ. ವಾರ್ನರ್ 871 ಅಂಕ, ವಿರಾಟ್ ಕೊಹ್ಲಿ 852 ಅಂಕ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಐಸಿಸಿದಕ್ಷಿಣ ಆಫ್ರಿಕಾಏಕದಿನ ರ್ಯಾಂಕಿಂಗ್South AfricaDavid WarnerICCAB de Villiersಎಬಿಡಿ ವಿಲಿಯರ್ಸ್ODI Rakingಡೇವಿಡ್ ವಾರ್ನರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


