ಕೊಹ್ಲಿ ತಂಡವನ್ನು ಸದೃಡಗೊಳಿಸಲು ಸ್ಟೀವ್ ಒ ಕೇಫೆರಂತೆ ಎಡಗೈಲಿ ಸ್ಪಿನ್ ಮಾಡಿದ ಕುಂಬ್ಳೆ
ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಗಾಗಿ ತಂಡವನ್ನು ಸದೃಡಗೊಳಿಸಲು ಇನ್ನಿಲ್ಲದಂತೆ ತಯಾರಿ ನೀಡುತ್ತಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಗಾಗಿ ತಂಡವನ್ನು ಸದೃಡಗೊಳಿಸಲು ಇನ್ನಿಲ್ಲದಂತೆ ತಯಾರಿ ನೀಡುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು ಆಸ್ಟ್ರೇಲಿಯಾದ ಆಕ್ರಮಣಕಾರಿ ಬೌಲರ್ ಸ್ಟೀವ್ ಒ ಕೇಫೆ ರಂತೆ ಅನಿಲ್ ಕುಂಬ್ಳೆ ಎಡಗೈಲಿ ಸ್ಪಿನ್ ಮಾಡಿ ತಂಡದ ಆಟಗಾರರಿಗೆ ತರಬೇತಿ ನೀಡುತ್ತಿದ್ದಾರೆ.
ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಒ ಕೇಫೆ 69 ರನ್ ಗಳಿಗೆ 12 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾಗೆ ಭರ್ಜರಿ 333 ರನ್ ಗಳ ಜಯ ಗಳಿಸಿಕೊಟ್ಟಿದ್ದರು. ಹೀಗಾಗಿ ಕೇಫೆ ಎಸೆತವನ್ನು ಅಳುಕಿಲ್ಲದೆ ಎದುರಿಸಲು ತಂಡಕ್ಕೆ ಉತ್ತಮ ತರಬೇತಿ ನೀಡುತ್ತಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ-ಭಾರತ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ಮುಂದಿನ ಪಂದ್ಯ ರಾಂಚಿಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೋ ಅವರಿಗೆ ಸರಣಿ ಗೆಲುವು ಸಾಧ್ಯತೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಅನಿಲ್ ಕುಂಬ್ಳೆAnil KumbleSteve O\' Keefeಸ್ಟೀವ್ ಒ ಕೇಫೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


