ಕಾಲು ಮುರಿತ: ಭಾರತ ವಿರುದ್ಧದ ಉಳಿದೆರೆಡು ಟೆಸ್ಟ್ ಪಂದ್ಯಗಳಿಂದ ಸ್ಟಾರ್ಕ್ ಔಟ್
ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅವರ ಕಾಲು ಮುರಿತಗೊಂಡಿರುವುದರಿಂದ ಭಾರತ ವಿರುದ್ಧದ ಉಳಿದೆರೆಡು ಟೆಸ್ಟ್ ಪಂದ್ಯಗಳಿಂದ...

Published On :
ರಾಂಚಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅವರ ಕಾಲು ಮುರಿತಗೊಂಡಿರುವುದರಿಂದ ಭಾರತ ವಿರುದ್ಧದ ಉಳಿದೆರೆಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಬೆಂಗಳೂರು ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಯಿಂದ ಬಳಲಿದ್ದ ಮಿಚೆಲ್ ಸ್ಟಾರ್ಕ್ ಅವರಿಗೆ ಇದೀಗ ನೋವು ಹೆಚ್ಚಾಗಿದ್ದು ಸ್ವದೇಶಕ್ಕೆ ಮರಳಲಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು, ಈ ಮಧ್ಯೆ ಅನುಭವಿ ಆಟಗಾರ ಮಿಚೆಲ್ ಸ್ಟಾರ್ಕ್ ತಂಡದಿಂದ ಹೊರಗುಳಿದಿರುವುದು ಆಸ್ಟ್ರೇಲಿಯಾಗೆ ಹಿನ್ನಡೆಯಾಗಿದೆ.
ಸದ್ಯ ಮಿಚೆಲ್ ಸ್ಟಾರ್ಕ್ ಅವರ ಬದಲಿಗೆ ಯಾವ ಆಟಗಾರ ತಂಡವನ್ನು ಸೇರಲಿದ್ದಾರೆ ಎಂಬುದನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತಿಳಿಸಿಲ್ಲ. ಆದರೆ ಜಾಕ್ಸನ್ ಬರ್ಡ್ ಲೂಮ್ಸ್ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


