ಕಳಪೆ ಬ್ಯಾಟಿಂಗ್: ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್‌ನಲ್ಲಿ 4ನೇ ಸ್ಥಾನಕ್ಕೆ ಕುಸಿದ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು ಕಳಪೆ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ...

Published On :
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು ಕಳಪೆ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿರುವುದು ಶ್ರೇಯಾಂಕ ಕುಸಿತಕ್ಕೆ ಕಾರಣವಾಗಿದೆ. ಕಳೆದ ಎರಡು ಟೆಸ್ಟ್ ನ ನಾಲ್ಕು ಇನ್ನಿಂಗ್ಸ್ ನಲ್ಲಿ ಕೊಹ್ಲಿ ಕೇವಲ 40 ರನ್ ಗಳಿಸಿದ್ದಾರೆ.
ಇನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಎರಡು ಸ್ಥಾನ ಮೇಲಕ್ಕೇರಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ಎಂದಿನಂತೆ ಆಸ್ಟ್ರೇಲಿಯಾದ ನಾಯಕ ಸ್ವೀವ್ ಸ್ಮಿತ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ನ ಜೋ ರೂಟ್ ಇದ್ದಾರೆ.
ಬೌಲಿಂಗ್ ಮತ್ತು ಆಲ್ರೌಂಡರ್ ವಿಭಾಗದಲ್ಲಿ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ನಂಬರ್ ರ್ಯಾಂಕಿಂಗ್ ತಂಡದಲ್ಲಿ ಭಾರತ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರು ಟೆಸ್ಟ್ ಗೆಲುವು ಭಾರತ ಅಗ್ರಸ್ಥಾನ ಕಾಯ್ದುಕೊಳ್ಳಲು ನೆರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಐಸಿಸಿರ್ಯಾಂಕಿಂಗ್ICCRankingsTest batsmenಟೆಸ್ಟ್ ಬ್ಯಾಟ್ಸ್ಮನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


