ಟೆಸ್ಟ್ ಕ್ರಿಕೆಟ್ ಗೆ 140 ವರ್ಷ ಹಿನ್ನೆಲೆ: ಗೂಗಲ್ ಡೂಡಲ್
ಟೆಸ್ಟ್ ಕ್ರಿಕೆಟ್ ಗೆ 140 ವರ್ಷ ತುಂಬಿದ ಹಿನ್ನೆಲೆಯಲ್ಲಿ ತಂತ್ರಜ್ಞಾನ ದೈತ್ಯ ಗೂಗಲ್ ರೇಖಾ ಚಿತ್ರ ನಮನ ಸಲ್ಲಿಸಿದೆ. 1877 ರಲ್ಲಿ ಮೊಟ್ಟ ಮೊದಲ ಬಾರಿಗೆ ಇಂಗ್ಲೆಂಡ್ ...

Published On :
ನವದೆಹಲಿ: ಟೆಸ್ಟ್ ಕ್ರಿಕೆಟ್ ಗೆ 140 ವರ್ಷ ತುಂಬಿದ ಹಿನ್ನೆಲೆಯಲ್ಲಿ ತಂತ್ರಜ್ಞಾನ ದೈತ್ಯ ಗೂಗಲ್ ರೇಖಾ ಚಿತ್ರ ನಮನ ಸಲ್ಲಿಸಿದೆ. 1877 ರಲ್ಲಿ ಮೊಟ್ಟ ಮೊದಲ ಬಾರಿಗೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಅಧಿಕೃತ ಪಂದ್ಯ ನಡೆಯಿತು.
1877 ರ ಮಾರ್ಚ್ 15ರಂದು ಆಸ್ಟ್ರೇಲಿಯದ ಮೆಲ್ಬರ್ನೋ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಪಂದ್ಯ ಕ್ರಿಕೆಟ್ ನ ಇತಿಹಾಸದಲ್ಲಿ ಮೊದಲ ಪಂದ್ಯವಾಗಿ ಗುರುತಾಯಿತು. ಮೊಟ್ಟ ಮೊದಲ ಅಧಿಕೃತ ಕ್ರಿಕೆಟ್ ಪಂದ್ಯ ಎಂಬ ಹೆಗ್ಗಳಿಕೆ ಪಡೆದಿದ್ದ ಈ ಪಂದ್ಯದಲ್ಲಿ ಆಗಷ್ಟೆ ಕ್ರಿಕೆಟ್ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿದ್ದ ಆಸ್ಟ್ರೇಲಿಯಾ ಅನುಭವಿ ಇಂಗ್ಲೆಂಡ್ ಅನ್ನು 45 ರನ್ ಗಳಿಂದ ಸೋಲಿಸಿ ದಾಖಲೆ ಬರೆಯಿತು.
ಆದರೆ ಅದೇ ಜಾಗದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು. ಅದರ ಗುರುತಾಗಿ ಇಂದು ಗೂಗಲ್ ತನ್ನ ಸೈಟ್ ನಲ್ಲಿ ಗೌರವ ರೇಖಾಚಿತ್ರ ನಮನ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


