ಕ್ರಿಕೆಟ್

ಕೊಹ್ಲಿ ಪಡೆಯ ಆಕ್ರಮಣಶೀಲ ಆಟಕ್ಕೆ ಕಡಿವಾಣ ಹಾಕಲ್ಲ: ಅನಿಲ್ ಕುಂಬ್ಳೆ

ಆಸ್ಟ್ರೇಲಿಯಾ ವಿರುದ್ಧದ ಇನ್ನುಳಿದ ಎರಡು ಪಂದ್ಯಗಳಲ್ಲಿ ಆಟಗಾರರ ಆಕ್ರಮಣಕಾರಿ ಆಟಕ್ಕೆ ಯಾವುದೇ ಕಡಿವಾಣ ಹೇರುವುದಿಲ್ಲ ಎಂದು ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ...

ಕೊಹ್ಲಿ ಪಡೆಯ ಆಕ್ರಮಣಶೀಲ ಆಟಕ್ಕೆ ಕಡಿವಾಣ ಹಾಕಲ್ಲ: ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ, ವಿರಾಟ್ ಕೊಹ್ಲಿ
Published On :
ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಇನ್ನುಳಿದ ಎರಡು ಪಂದ್ಯಗಳಲ್ಲಿ ಆಟಗಾರರ ಆಕ್ರಮಣಕಾರಿ ಆಟಕ್ಕೆ ಯಾವುದೇ ಕಡಿವಾಣ ಹೇರುವುದಿಲ್ಲ ಎಂದು ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಸ್ಪಷ್ಟಪಡಿಸಿದ್ದಾರೆ. 
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು ಇನ್ನುಳಿದ ಎರಡೂ ಪಂದ್ಯಗಳು ನಮಗೆ ಮುಖ್ಯವಾಗಿದೆ. ಹೀಗಾಗಿ ತಂಡದ ಪ್ರತಿಯೊಬ್ಬ ಆಟಗಾರನೂ ತನ್ನದೇ ಸಹಜ ಆಟವಾಡಲು ಯಾವುದೇ ನಿರ್ಬಂಧ ಹೇರಿಲ್ಲ ಎಂದರು. 
ಇದೇ ವೇಳೆ ಎರಡನೇ ಟೆಸ್ಟ್ ಪಂದ್ಯದ ವೇಳೆ ಡಿಆರ್ಎಸ್ ವಿವಾದ ಹುಟ್ಟುಹಾಕಿದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ವಿರುದ್ಧದ ದೂರನ್ನು ಐಸಿಸಿಯಿಂದ ಹಿಂಪಡೆದ ಬಿಸಿಸಿಐನ ಕ್ರಮ ಅತ್ಯಂತ ಪ್ರಬುದ್ಧತನದ್ದು ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.