"ದಿ ವಾಲ್" ರಾಹುಲ್ ದ್ರಾವಿಡ್ ದಾಖಲೆ ಮುರಿದ ಪೂಜಾರಾ!
ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ನಲ್ಲಿ ಭಾರತದ ಪಾರುಪತ್ಯ ಮುಂದುವರೆದಿದ್ದು, ಭಾರತದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದ ಚೇತೇಶ್ವರ ಪೂಜಾರ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ.

ರಾಂಚಿ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ನಲ್ಲಿ ಭಾರತದ ಪಾರುಪತ್ಯ ಮುಂದುವರೆದಿದ್ದು, ಭಾರತದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದ ಚೇತೇಶ್ವರ ಪೂಜಾರ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 525 ಎಸೆತಗಳನ್ನು ಎದುರಿಸಿರುವ ಪೂಜಾರ ಟೆಸ್ಟ್ ಕ್ರಿಕೆಟ್ ನಲ್ಲಿ ಸುದೀರ್ಘ ಇನ್ನಿಂಗ್ಸ್ ಆಡಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಒಟ್ಟು 525 ಎಸೆತಗಳನ್ನು ಎದುರಿಸಿ ಸುದೀರ್ಘ ಇನ್ನಿಂಗ್ಸ್ ಆಡಿದ ಮೊದಲ ಭಾರತೀಯ ಕ್ರಿಕೆಟಿಗೆ ಎಂಬ ಕೀರ್ತಿಗೆ ಪೂಜಾರ ಭಾಜನರಾಗಿದ್ದಾರೆ. ಈ ಹಿಂದೆ "ದಿ ವಾಲ್" ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿ ಈ ದಾಖಲೆ ಇತ್ತು. 2004ರಲ್ಲಿ ಪಾಕಿಸ್ತಾನದ ವಿರುದ್ಧ ರಾಹುಲ್ ದ್ರಾವಿಡ್ 495 ಎಸೆತಗಳನ್ನು ಎದುರಿಸಿದ್ದರು.
ಇದು ಈ ವರೆಗೆ ಭಾರತೀಯ ಕ್ರಿಕೆಟ್ ಆಟಗಾರನ ಸುದೀರ್ಘ ಇನ್ನಿಂಗ್ಸ್ ಎಂದು ದಾಖಲಾಗಿತ್ತು. ಆದರೆ ಇದೀಗ ಪೂಜಾರ ಅದನ್ನೂ ಮೀರಿದ ಇನ್ನಿಂಗ್ಸ್ ಆಡಿದ್ದು, ಟೀಂ ಇಂಡಿಯಾದ ಎರಡನೇ ವಾಲ್ ಎಂಬ ಖ್ಯಾತಿಗೆ ಹತ್ತಿರವಾಗುತ್ತಿದ್ದಾರೆ. ಅಂತೆಯೇ ಈ ಸುದೀರ್ಘ ಇನ್ನಿಂಗ್ಸ್ ಮೂಲಕ ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ಕೀರ್ತಿಗೂ ಪೂಜಾರಾ ಭಾಜನರಾಗಿದ್ದಾರೆ.
ದ್ವಿಶತಕದಲ್ಲೂ ಪೂಜಾರ ದಾಖಲೆ!
ಇನ್ನು ಈ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ ಪೂಜಾರಾಗೆ ಇದು ವೃತ್ತಿ ಜೀವನದ ಮೂರನೇ ದ್ವಿಶತಕವಾಗಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮೂರು ದ್ವಿಶತಕಗಳನ್ನು ಸಿಡಿಸುವ ಮೂಲಕ ಪೂಜಾರ ಗ್ರೇಮ್ ಪೊಲ್ಲಾಕ್, ಸಚಿನ್ ತೆಂಡೂಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಅವರ ದಾಖಲೆಯನ್ನು ಮುರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


