ಐಸಿಸಿ ಟೆಸ್ಟ್ ರ್ಯಾಂಕಿಂಗ್: ಜಡೇಜಾ ನಂ.1 ಬೌಲರ್. ಪೂಜಾರ ನಂ.2 ಬ್ಯಾಟ್ಸ್‌ಮನ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ...

Published On :
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ನಂಬರ್ 1 ಬೌಲರ್ ಆಗಿ ಅಗ್ರಸ್ಥಾನಕ್ಕೇರಿದ್ದಾರೆ.
ಇನ್ನು ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ ಚೇತೇಶ್ವರ ಪೂಜಾರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ನಂಬರ್ 2 ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಇಬ್ಬರು ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿರುವುದು ಅಗ್ರಸ್ಥಾನಕ್ಕೇರಲು ಸಾಧ್ಯವಾಗಿದೆ. ಈ ಹಿಂದೆ ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನದಲ್ಲಿದ್ದರು. ಆಸ್ಟ್ರೇಲಿಯಾ ವಿರುದ್ಧ ಹೆಚ್ಚು ವಿಕೆಟ್ ಗಳನ್ನು ಪಡೆಯುವಲ್ಲಿ ವಿಫಲರಾದ ಅಶ್ವಿನ್ ಅಗ್ರಸ್ಥಾನದಿಂದ ಕೆಳಗಿಳಿದಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಟೆಸ್ಟ್ ಸರಣಿಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಡೇಜಾ ಒಟ್ಟಾರೆ 21 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಇನ್ನು ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಖ್ಯಾತಿಯನ್ನು ಜಡೇಜಾ ಪಡೆದಿದ್ದಾರೆ. ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಜಡೇಜಾ ಒಟ್ಟು 899 ಅಂಕಗಳನ್ನು ಗಳಿಸಿದ್ದರೆ, ಅಶ್ವಿನ್ 862 ಅಂಕಗಳನ್ನು ಪಡೆದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಚೇತೇಶ್ವರ ಪೂಜಾರ ಒಟ್ಟು 861 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾದ ನಾಯಕ ಸ್ಟಿನ್ ಸ್ಮಿತ್ 941 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ತುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


