ಕ್ರಿಕೆಟ್

ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 5ನೇ ಅರ್ಧಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಐದು ಅರ್ಧ ಶತಕಗಳನ್ನು ಸಿಡಿಸಿದ್ದಾರೆ...

ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 5ನೇ ಅರ್ಧಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್
ಕೆಎಲ್ ರಾಹುಲ್
Published On :
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಐದು ಅರ್ಧ ಶತಕಗಳನ್ನು ಸಿಡಿಸಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು, ಈ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 60 ರನ್ ಗಳಿಸಿ ಔಟಾದರು. ಈ ಮೂಲಕ ಸರಣಿಯಲ್ಲಿ ಐದು ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರಾಹುಲ್ 64 ರನ್ ಗಳಿಸಿದ್ದರು. ನಂತರ ಬೆಂಗಳೂರಿನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 90 ರನ್ ಮತ್ತು ದ್ವಿತೀಯ ಇನ್ನಿಂಗ್ಸ್ ನಲ್ಲಿ 51 ರನ್ ಸಿಡಿಸಿದ್ದರು. 
ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆದಿದ್ದು ಈ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 67 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದರಲ್ಲಿ 5 ಅರ್ಧಶತಕ ಸಿಡಿಸಿದ ಸಾಧನೆಯನ್ನು ಮುರಳಿ ವಿಜಯ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.