ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ವಿಶ್ವಾಸವಿದೆ: ಎಬಿ ಡಿವಿಲಿಯರ್ಸ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಡುವಿನ ಅಗ್ಗಜಗ್ಗಾಟ ತಾರಕಕ್ಕೇರಿದ್ದು ಈ ಮಧ್ಯೆ...

Published On :
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಡುವಿನ ಅಗ್ಗಜಗ್ಗಾಟ ತಾರಕಕ್ಕೇರಿದ್ದು ಈ ಮಧ್ಯೆ ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವುದು ಅನುಮಾನ ಎನ್ನಲಾಗಿದೆ. ಆದರೆ ದಕ್ಷಿಣ ಆಫ್ರಿಕಾದ ನಾಯಕ ಎಬಿ ಡಿವಿಲಿಯರ್ಸ್ ಟ್ರೋಫಿಯಲ್ಲಿ ಭಾರತ ಆಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಚಾಂಪಿಯನ್ ಟ್ರೋಫಿಯಲ್ಲಿ ಹಾಲಿ ಚಾಂಪಿಯನ್ ತಂಡ ಟೀಂ ಇಂಡಿಯಾ ಖಂಡಿತವಾಗಿಯೂ ಭಾಗವಹಿಸಲಿದೆ. ಮಿನಿ ವಿಶ್ವಕಪ್ ಎಂದೇ ಹೆಸರಾಗಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಇಲ್ಲ ಎಂಬುದನ್ನು ಕಲ್ಪಿಸಿಕೊಳ್ಳುವುದೇ ಅಸಾಧ್ಯ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಭಾಗವಹಿಸುವ ವಿಶ್ವಾಸವಿದ್ದು, ಅದೇ ನಿಟ್ಟಿನಲ್ಲಿ ಐಸಿಸಿ ಕಾರ್ಯನಿರ್ವಹಿಸಲಿದೆ ಎಂದು ಖಾಸಗಿ ಸುದ್ದಿವಾಹಿನಿಗೆ ತಿಳಿಸಿದ್ದಾರೆ.
ಐಸಿಸಿ ಮತ್ತು ಬಿಸಿಸಿಐ ಮಧ್ಯೆ ಆದಾಯ ಹಂಚಿಕೆ ಸಂಬಂಧ ಭಿನ್ನಾಭಿಪ್ರಾಯಗಳು ಉಂಟಾಗಿದ್ದು ಈ ಹಿನ್ನಲೆಯಲ್ಲಿ ಐಸಿಸಿ ಬಿಸಿಸಿಐಗೆ ಹೆಚ್ಚುವರಿಯಾಗಿ 100 ಮಿಲಿಯನ್ ಡಾಲರ್ ನೀಡುವ ಆಫರ್ ನೀಡಿತ್ತು. ಆದರೆ ಈ ಆಫರ್ ಅನ್ನು ತಿರಸ್ಕರಿಸಿದ್ದ ಬಿಸಿಸಿಐ ಚಾಂಪಿಯನ್ ಟ್ರೋಫಿಗೆ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸದೇ ಸುಮ್ಮನಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam Indiaಐಸಿಸಿಚಾಂಪಿಯನ್ಸ್ ಟ್ರೋಫಿChampions TrophyICCAB de Villiersಎಬಿ ಡಿವಿಲಿಯರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


