ಚಾಂಪಿಯನ್ಸ್ ಟ್ರೋಫಿ ಬಗ್ಗೆ ಮಾತನಾಡಿದಕ್ಕೆ ಕೋಚ್ ಹುದ್ದೆಯಿಂದ ಕುಂಬ್ಳೆಗೆ ಕೊಕ್?
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಭಾಗವಹಿಸಬೇಕು ಎಂದು ಹೇಳಿದ್ದ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ...

Published On :
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಭಾಗವಹಿಸಬೇಕು ಎಂದು ಹೇಳಿದ್ದ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಚಾಂಪಿಯನ್ಸ್ ಟ್ರೋಫಿಗೆ ಗೈರಾಗುವ ಮೂಲಕ ಐಸಿಸಿಗೆ ಸೆಡ್ಡು ಹೊಡೆಯಲು ಬಿಸಿಸಿಐ ಮುಂದಾಗಿದೆ. ಈ ಮಧ್ಯೆ ಅನಿಲ್ ಕುಂಬ್ಳೆ ಅವರ ವರ್ತನೆಗೆ ಬಿಸಿಸಿಐ ಆಕ್ರೋಶಗೊಂಡಿದೆ.
ಅನಿಲ್ ಕುಂಬ್ಳೆ ಅವರು ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ಯಾವುದೇ ವ್ಯಕ್ತಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅದಕ್ಕೊಂದು ನೀತಿ, ನಿಯಮವಿದೆ. ಅದನ್ನು ಕುಂಬ್ಳೆ ಉಲ್ಲಂಘಿಸಿದ್ದಾರೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ಗೆ ಕುಂಬ್ಳೆ ಕೊಡುಗೆ ಅಪಾರವಾದದ್ದಾಗಿದೆ. ಅದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಹಾಗಂದ ಮಾತ್ರಕ್ಕೆ ಕ್ರಿಕೆಟ್ ಮಂಡಳಿಯನ್ನು ಮೀರಿ ಅಧಿಕಾರವಿರುವವವರನ್ನು ಸದಾ ಸಂಪರ್ಕಿಸುವ ಮೂಲಕ ಕುಂಬ್ಳೆ ತಪ್ಪು ಮಾಡಿದ್ದಾರೆ ಎಂದು ಕಟು ಶಬ್ದಗಳಿಂದ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaBCCIಬಿಸಿಸಿಐಚಾಂಪಿಯನ್ಸ್ ಟ್ರೋಫಿChampions Trophyಅನಿಲ್ ಕುಂಬ್ಳೆAnil Kumble
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


