ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ
ಐಪಿಎಲ್ 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಗಳಿಸಿದೆ...

Published On :
ನವದೆಹಲಿ: ಐಪಿಎಲ್ 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಗಳಿಸಿದೆ.
ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. 213 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 66 ರನ್ ಗಳಿಗೆ ಸರ್ವಪತನ ಕಂಡಿದ್ದು, 146 ರನ್ ಗಳಿಗೆ ಹೀನಾಯ ಸೋಲು ಕಂಡಿದೆ.
ಟೂರ್ನಿಯಲ್ಲಿ 9ನೇ ಜಯದೊಂದಿಗೆ ರೋಹಿತ್ ಶರ್ಮಾ ಪಡೆ ಪ್ಲೇ-ಆಫ್ ಸ್ಥಾನ ಭದ್ರಪಡಿಸಿಕೊಂಡಿದೆ. ಇನ್ನು ಡೆಲ್ಲಿ ತಂಡ ಪ್ಲೇ-ಆಫ್ ಕನಸಿಗೆ ಈ ದೊಡ್ಡ ಅಂತರದ ಸೋಲು ದೊಡ್ಡ ಹೊಡೆತವನ್ನೇ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


