ಕ್ರಿಕೆಟ್

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಎಂಟಿಸಿ ಬಸ್‌ನಲ್ಲಿ ಬಂದ ವಿರಾಟ್ ಕೊಹ್ಲಿ ಪಡೆ

ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ತಾವು ತಂಗಿದ್ದ...

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಎಂಟಿಸಿ ಬಸ್‌ನಲ್ಲಿ ಬಂದ ವಿರಾಟ್ ಕೊಹ್ಲಿ ಪಡೆ
ಆರ್ಸಿಬಿ ಆಟಗಾರರು
Published On :
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ತಾವು ತಂಗಿದ್ದ ಹೋಟೆಲ್ ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ನಲ್ಲಿ ಮೈದಾನಕ್ಕೆ ಪ್ರಯಾಣ ಬೆಳೆಸಿದರು. 
ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ಆರ್ಸಿಬಿ ಆಟಗಾರರು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಈ ಸುದ್ದಿ ತಿಳಿದ ಆರ್ಸಿಬಿ ನೂರಾರು  ಅಭಿಮಾನಿಗಳು ಹೊಟೇಲ್ ಮುಂದೆ ಜಮಾಯಿಸಿದ್ದರು. ತಮ್ಮ ನೆಚ್ಚಿನ ಆಟಗಾರರನ್ನು ಸಮೀಪದಿಂದ ಕಂಡ ಅಭಿಮಾನಿಗಳು ಪುಳಕಗೊಂಡರು. 
ಇನ್ನು ಕಳೆದ ಆವೃತ್ತಿಗಳಂತೆ ಈ ಬಾರಿಯೂ ಆರ್ಸಿಬಿ ಗ್ರೋ ಗ್ರೀನ್ ಅಭಿಯಾನ ನಡೆಸಿತು. ತಂಡದ ಆಟಗಾರರು ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿದ್ದರು. ತಂಡದ ಜೆರ್ಸಿ ಮರುಬಳಕೆ ಮಾಡಿದ ಪ್ಲಾಸ್ಟಿಕ್ ಬಾಟಲ್ ಗಳಿಂದ ಉತ್ಪಾದಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.