ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲಿ 10 ಪಂದ್ಯಗಳ ಸೋಲಿನ ದಾಖಲೆ ಬರೆದ ಆರ್‌ಸಿಬಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಇದೇ ಮೊದಲ ಬಾರಿಗೆ ಕಳಪೆ ಮಟ್ಟದ...

ಐಪಿಎಲ್ ಇತಿಹಾಸದಲ್ಲಿ 10 ಪಂದ್ಯಗಳ ಸೋಲಿನ ದಾಖಲೆ ಬರೆದ ಆರ್‌ಸಿಬಿ
ವಿರಾಟ್ ಕೊಹ್ಲಿ ಪಡೆ
Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಇದೇ ಮೊದಲ ಬಾರಿಗೆ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದು 10 ಪಂದ್ಯಗಳ ಸೋಲಿನ ಮೂಲಕ ಮತ್ತೊಂದು ಸಾಧನೆ ಮಾಡಿದೆ. 
ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ವಿರಾಟ್ ಕೊಹ್ಲಿ ಪಡೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಹೀನಾಯ ಸೋಲುಗಳನ್ನು ಕಂಡಿದೆ. ಆಡಿರುವ 13 ಪಂದ್ಯಗಳಲ್ಲಿ 2 ಪಂದ್ಯವನ್ನು ಮಾತ್ರ ಗೆದ್ದಿದೆ. 10 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಬೆಂಗಳೂರು ತಂಡ ಒಂದು ಆವೃತ್ತಿಯಲ್ಲಿ 10 ಪಂದ್ಯಗಳನ್ನು ಸೋತಿರುವುದು ಇದೇ ಮೊದಲು. 
10 ಐಪಿಎಲ್ ಗಳಲ್ಲಿ ಆರ್‌ಸಿಬಿ ತಂಡ ಮೂರು ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಇಲ್ಲಿಯವರೆಗೂ ಒಂದು ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿರಲಿಲ್ಲ. ಆದರೆ ಈ ಬಾರಿ ಆರ್‌ಸಿಬಿ ಚಾಂಪಿಯನ್ ತಂಡ ಎಂದು ಪರಿಗಣಿಸಲಾಗಿತ್ತು ಆದರೆ ಇದಕ್ಕೆ ವಿರಾಟ್ ಕೊಹ್ಲಿ ಪಡೆಯ ಕಳಪೆ ಪ್ರದರ್ಶನ ತಣ್ಣೀರು ಎರೆಚಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.