ಕ್ರಿಕೆಟ್

ರೈಸಿಂಗ್ ಪುಣೆ ಪ್ಲೇ-ಆಫ್ ಕನಸಿಗೆ ಡೆಲ್ಲಿ ಡೇರ್ ಡೆವಿಲ್ಸ್ ತಣ್ಣೀರು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ತಂಡಗಳು ಪ್ಲೇ-ಆಫ್ ಗೇರಲು ಜಿದ್ದಾಜಿದ್ದಿನ ಹೋರಾಟ ನಡೆಸುತ್ತೀವೆ. ಈ ಮಧ್ಯೆ ಡೆಲ್ಲಿ ಡೇರ್ ಡೆವಿಲ್ಸ್...

ರೈಸಿಂಗ್ ಪುಣೆ ಪ್ಲೇ-ಆಫ್ ಕನಸಿಗೆ ಡೆಲ್ಲಿ ಡೇರ್ ಡೆವಿಲ್ಸ್ ತಣ್ಣೀರು!
ಡೆಲ್ಲಿ ಡೇರ್ ಡೆವಿಲ್ಸ್
Published On :
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ತಂಡಗಳು ಪ್ಲೇ-ಆಫ್ ಗೇರಲು ಜಿದ್ದಾಜಿದ್ದಿನ ಹೋರಾಟ ನಡೆಸುತ್ತೀವೆ. ಈ ಮಧ್ಯೆ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಸೋಲುವ ಮೂಲಕ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪ್ಲೇ-ಆಫ್ ಗೇರಲು ಇನ್ನೊಂದು ಪಂದ್ಯದವರೆಗೂ ಕಾಯಬೇಕಿದೆ. 
ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪುಣೆ ಡೆಲ್ಲಿ ವಿರುದ್ಧ 7 ರನ್ ಗಳಿಂದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. 169 ರನ್ ಗಳ ಗುರಿ ಬೆನ್ನಟ್ಟಿದ ಪುಣೆ 7 ವಿಕೆಟ್ ಕಳೆದುಕೊಂಡು 161 ರನ್ ಪೇರಿಸಲಷ್ಟೇ ಶಕ್ತವಾಯಿತು. 
ಡೆಲ್ಲಿ ಪರ ಕರುಣ್ ನಾಯರ್(64) ಅರ್ಧ ಶತಕ ಬಾರಿಸಿ ತಂಡಕ್ಕೆ ನೆರವಾದರು. ಪಂತ್ ನಾಯರ್ 76 ರನ್ ಜತೆಯಾಟ ಉತ್ತಮ ಮೊತ್ತ ಕಲೆಹಾಕಲು ಸಾಧ್ಯವಾಯಿತು. ಇನ್ನು ಪುಣೆ ಪರ ಮನೋಜ್ ತಿವಾರಿ ಉತ್ತಮವಾಗಿ ಆಡಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.