ಐಪಿಎಲ್ ಪ್ಲೇ-ಆಫ್ ಗೆ ಲಗ್ಗೆ ಇಟ್ಟ ನಾಲ್ಕು ತಂಡಗಳು
2017ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪ್ಲೇ-ಆಫ್ಗೆ ಬಲಿಷ್ಠ ನಾಲ್ಕು ತಂಡಗಳು ಲಗ್ಗೆ ಇಟ್ಟಿವೆ...

Published On :
2017ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪ್ಲೇ-ಆಫ್ಗೆ ಬಲಿಷ್ಠ ನಾಲ್ಕು ತಂಡಗಳು ಲಗ್ಗೆ ಇಟ್ಟಿವೆ.
14 ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಅಂಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು 9 ಪಂದ್ಯಗಳನ್ನು ಗೆದ್ದಿರುವ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಎರಡನೇ ಸ್ಥಾನದಲ್ಲಿದ್ದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಮತ್ತು ಪುಣೆ ಸೆಣೆಸಲಿದ್ದು ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂದಿನ ಮಂಗಳವಾರ ಪಂದ್ಯ ನಡೆಯಲಿದೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಟೂರ್ನಿಯಲ್ಲಿ 8 ಪಂದ್ಯಗಳನ್ನು ಗೆಲ್ಲುವ ಮೂಲಕ ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದ್ದು ಉಭಯ ತಂಡಗಳು ಸೆಣೆಸಲಿವೆ.
ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದಲ್ಲಿ ಗೆದ್ದವರು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದ ಜತೆ ಸೆಣೆಸಲಿದೆ. ಈ ಪಂದ್ಯದಲ್ಲಿ ಸೋತವರು ಎಲಿಮಿನೇಟ್ ಆಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹೈದರಾಬಾದ್Kolkataಕೋಲ್ಕತ್ತಾಪುಣೆSunrisers HyderabadMumbai Indiansಮುಂಬೈ ಇಂಡಿಯನ್ಸ್ಪ್ಲೇ ಆಫ್ಐಪಿಎಲ್ 2017IPL 2017Rising Pune SupergiantPlay-offs
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


