ಕ್ರಿಕೆಟ್

2017ರ ಐಪಿಎಲ್ ಫೈನಲ್ ಪಂದ್ಯಕ್ಕೆ ಕನ್ನಡಿಗ ಜಾವಗಲ್ ಶ್ರೀನಾಥ್ ರೆಫರಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ಜಾವಗಲ್ ಶ್ರೀನಾಥ್ ಅವರು...

2017ರ ಐಪಿಎಲ್ ಫೈನಲ್ ಪಂದ್ಯಕ್ಕೆ ಕನ್ನಡಿಗ ಜಾವಗಲ್ ಶ್ರೀನಾಥ್ ರೆಫರಿ
ಜಾವಗಲ್ ಶ್ರೀನಾಥ್
Published On :
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ಜಾವಗಲ್ ಶ್ರೀನಾಥ್ ಅವರು ರೆಫರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 
ಮುಂಬೈನಲ್ಲಿ ಮೇ 16ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ 21ರಂದು ಹೈದರಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯಗಳ ರೆಫರಿಯಾಗಿ ಜಾವಗಲ್ ಶ್ರೀನಾಥ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. 
ಐಪಿಎಲ್ ಪ್ಲೇ-ಆಫ್ ಪಂದ್ಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದೆ. ಇದರಲ್ಲಿ ಎಸ್ ರವಿ, ಸಿ ಷಂಸುದ್ದೀನ್, ಒ ನಂದನ್, ಯಶವಂತ್ ಬರ್ದೆ, ಅನಿಲ್ ಚೌಧರಿ, ನಿತಿನ್ ಮೆನನ್, ಎ ನಂದ ಕಿಶೋರ್, ಕೆಎನ್ ಅನಂತ ಪದ್ಮನಾಭನ್ ಮತ್ತು ನಿಗೆಲ್ ಲಾಂಗ್ ಅವರು ಅಂಗಳದ ಅಂಪೈರ್ ಗಳಾಗಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.