ಕ್ರಿಕೆಟ್

ಚಾಂಪಿಯನ್ ಟ್ರೋಫಿ ಗೆಲ್ಲುವುದಷ್ಟೇ ಪಾಕಿಸ್ತಾನದ ಗುರಿ, ಭಾರತವನ್ನು ಸೋಲಿಸುವುದಲ್ಲ: ಇಂಜಮಾಮ್

ಚಾಂಪಿಯನ್ ಟ್ರೋಫಿ ಗೆಲ್ಲುವುದಷ್ಟೇ ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಭಾರತವನ್ನು ಸೋಲಿಸುವುದಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಇಂಜಮಾಮ್-ಉಲ್-ಹಕ್ ಅವರು...

ಚಾಂಪಿಯನ್ ಟ್ರೋಫಿ ಗೆಲ್ಲುವುದಷ್ಟೇ ಪಾಕಿಸ್ತಾನದ ಗುರಿ, ಭಾರತವನ್ನು ಸೋಲಿಸುವುದಲ್ಲ: ಇಂಜಮಾಮ್
ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಇಂಜಮಾಮ್-ಉಲ್-ಹಕ್
Published On :
ಕರಾಚಿ: ಚಾಂಪಿಯನ್ ಟ್ರೋಫಿ ಗೆಲ್ಲುವುದಷ್ಟೇ ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಭಾರತವನ್ನು ಸೋಲಿಸುವುದಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಇಂಜಮಾಮ್-ಉಲ್-ಹಕ್ ಅವರು ಬುಧವಾರ ಹೇಳಿದ್ದಾರೆ. 
ಜೂನ್.1ರಿಂದ ಚಾಂಪಿಯನ್ಸ್ ಟ್ರೋಫಿ ಇಂಗ್ಲೆಂಡ್ ನಲ್ಲಿ ಆರಂಭವಾಗಲಿದೆ. ಆರಂಭವಾಗಲಿರುವ ಈ ಕೂಟದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಹೀಗಾಗಿ ಭಾರತ ಮೊದಲ ಪಂದ್ಯವನ್ನು ಜೂ.4ರಂದು ಪಾಕಿಸ್ತಾನದೊಂದಿಗೆ ಆರಂಭ ಮಾಡಲಿದೆ. 
ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ವಾತಾವರಣ ಹದಗೆಟ್ಟ ಕಾರಣ ಅದು ಕ್ರಿಕೆಟ್ ಮೇಲೆಯೂ ಗಂಭೀರ ಪರಿಣಾಮ ಬೀರಿದೆ. ಇನ್ನೇನು ಸರಿ ಹೋಗಿದೆ ಎನ್ನುತ್ತಿದ್ದಂತೆಯೇ ಮತ್ತೊಂದು ಸಮಸ್ಯೆ, ವಿವಾದಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುವುದು ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿಗಳಲ್ಲಿ ಮಾತ್ರವಾಗಿದೆ. ಸಮಸ್ಯೆ, ವಿವಾದಗಳ ನಡುವೆಯೂ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮೂಲಕ ಮುಖಾಮುಖಿಯಾಗುತ್ತಿರುವ ಹಿನ್ನಲೆಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳಲ್ಲಿ ಕ್ರೇಜ್ ಸೃಷ್ಟಿಯಾಗಿದೆ. ಈ ನಡುವೆ ಬೆಟ್ಟಿಂಗ್ ದಂಧೆಗಳೂ ಕೂಡ ಜೋರಾಗಿ ನಡೆಯುತ್ತಿವೆ. 
ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯಾವಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಇಂಜಮಾಮ್ ಉಲ್ ಹಕ್ ಅವರು, ಭಾರತವನ್ನು ಸೋಲಿಸುವ ಸಲುವಾಗಿ ನಾವು ಇಂಗ್ಲೆಂಡ್ ಗೆ ಹೋಗುತ್ತಿಲ್ಲ. ನಮ್ಮ ಗುರಿ ಕೇವಲ ಚಾಂಪಿಯನ್ ಟ್ರೋಫಿ ಗೆಲ್ಲುವುದಷ್ಟೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.