ಕ್ರಿಕೆಟ್

2017ರ ಐಪಿಎಲ್ ಚಾಂಪಿಯನ್ ಪಟ್ಟಕ್ಕಾಗಿ ಪುಣೆ-ಮುಂಬೈ ಫೈಟ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ...

2017ರ ಐಪಿಎಲ್ ಚಾಂಪಿಯನ್ ಪಟ್ಟಕ್ಕಾಗಿ ಪುಣೆ-ಮುಂಬೈ ಫೈಟ್
ಮುಂಬೈ ಇಂಡಿಯನ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್
Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿದೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ನಿರಾಯಾಸ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. 
ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 18.5 ಓವರ್ ಗಳಲ್ಲಿ 107 ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಸುಲಭ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 14.3 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 111 ಸಿಡಿಸಿ ಗೆಲುವಿನ ನಗೆ ಬೀರಿತು. 
ನಾಳೆ ರಾತ್ರಿ 8 ಗಂಟೆಗೆ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.