ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್ ಹತ್ಯೆ: ಭಾರತೀಯ ಸೇನೆಯನ್ನು ಕೊಂಡಾಡಿದ ಸೆಹ್ವಾಗ್
ಟ್ರಾಲ್ ನಲ್ಲಿ ನಡೆಸಲಾದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಭಟ್ ನನ್ನು ಹತ್ಯೆ ಸಂಬಂಧ ಭಾರತೀಯ ..

Published On :
ನವದೆಹಲಿ: ಟ್ರಾಲ್ ನಲ್ಲಿ ನಡೆಸಲಾದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಭಟ್ ನನ್ನು ಹತ್ಯೆ ಸಂಬಂಧ ಭಾರತೀಯ ಸೇನೆಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಭಾರತೀಯ ಸೇನೆಗೆ ಗೌರವ ಸಮರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸೆಹ್ವಾಗ್ ಇಂದು ಭಾರತೀಯ ಸೇನೆ ಅತಿದೊಡ್ಡ ಕೆಲಸ ಮಾಡಿದೆ ಎಂದು ಕೊಂಡಾಡಿದ್ದಾರೆ. ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿದ್ದಭದ್ರತಾ ಪಡೆಗಳು 2 ಪ್ರತ್ಯೇಕ ಎನ್ ಕೌಂಟರ್ ಗಳನ್ನು ನಡೆಸಿತ್ತು.
ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್ ಅಲಿಯಾಸ್ ಅಬು ಜರಾರ್ ಸೇರಿ 8 ಮಂದಿ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿತ್ತು.
ಪುಲ್ವಾಮಾ ಜಿಲ್ಲೆಯ ಟ್ರಾಲ್ ಸೆಕ್ಟರ್ ನ ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyencounterVirender Sehwagವೀರೇಂದ್ರ ಸೆಹ್ವಾಗ್ಭಾರತೀಯ ಸೇನೆಎನ್ ಕೌಂಟರ್Sabzar Ahmad Bhatಸಬ್ಜಾರ್ ಅಹ್ಮದ್ ಭಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


