ಕ್ರಿಕೆಟ್

ಕಾಬೂಲ್ ದಾಳಿ ಎಫೆಕ್ಟ್: ಮುರಿದು ಬಿದ್ದ ಪಾಕ್-ಅಫ್ಘಾನಿಸ್ತಾನ ಕ್ರಿಕೆಟ್ ಸಂಬಂಧ!

ಪಾಕಿಸ್ತಾನದೊಂದಿಗೆ ನಡೆಯಬೇಕಿದ್ದ ಕ್ರಿಕೆಟ್ ಸರಣಿಯನ್ನು ಭಾರತ ರದ್ದುಗೊಳಿಸಿದ ಬಳಿಕ ಅಫ್ಘಾನಿಸ್ತಾನ ಸಹ ಭಾರತದ ಹಾದಿಯಲ್ಲೇ ನಡೆದಿದೆ.

ಕಾಬೂಲ್ ದಾಳಿ ಎಫೆಕ್ಟ್: ಮುರಿದು ಬಿದ್ದ ಪಾಕ್-ಅಫ್ಘಾನಿಸ್ತಾನ ಕ್ರಿಕೆಟ್ ಸಂಬಂಧ!
ಅಫ್ಘಾನಿಸ್ತಾನ ಕ್ರಿಕೆಟ್ ತಂಡ (ಸಂಗ್ರಹ ಚಿತ್ರ)
Published On :
ಕಾಬೂಲ್: ಗಡಿಯಲ್ಲಿ ನಿರಂತರ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದೊಂದಿಗೆ ನಡೆಯಬೇಕಿದ್ದ ಕ್ರಿಕೆಟ್ ಸರಣಿಯನ್ನು ಭಾರತ ರದ್ದುಗೊಳಿಸಿದ ಬಳಿಕ ಅಫ್ಘಾನಿಸ್ತಾನ ಸಹ ಭಾರತದ ಹಾದಿಯಲ್ಲೇ ನಡೆದಿದೆ. 
ಪಾಕ್ ಭಯೋತ್ಪಾದಕರು ಕಾಬೂಲ್ ನಲ್ಲಿ ಭಯೋತ್ಪಾದಕ ದಾಳಿ ನಡೆಸಿದ ಬೆನ್ನಲ್ಲೇ ಅಪ್ಘಾನಿಸ್ತಾನ ಪಾಕಿಸ್ತಾನದೊಂದಿಗಿನ ಎಲ್ಲಾ ಕ್ರಿಕೆಟ್ ಯೋಜನೆಗಳಿಗೂ ತಿಲಾಂಜಲಿ ಇತ್ತಿದೆ. ಪಾಕಿಸ್ತಾನ ಅಪ್ಘಾನಿಸ್ತಾನದ ವಿರುದ್ಧವಾಗಿಯೂ ಪರೋಕ್ಷ ಯುದ್ಧ ನಡೆಸುತ್ತಿದೆ. ಆದರೆ ಉಭಯ ರಾಷ್ಟ್ರಗಳ ನಡುವೆ ಸೌಹಾರ್ದಯುತ ಸಂಬಂಧ ಏರ್ಪಡುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಟಿ 20 ಕ್ರಿಕೆಟ್ ಸರಣಿಯನ್ನು ಆಯೋಜಿಸಲಾಗಿತ್ತು. 2017 ರ ಜುಲೈ ಅಥವಾ ಆಗಸ್ಟ್ ನಲ್ಲಿ ಕಾಬೂಲ್ ನಲ್ಲಿ ಪಾಕಿಸ್ತಾನ-ಅಫ್ಘಾನಿಸ್ತಾನ ನಡುವಿನ ಮೊದಲ ಟಿ 20 ಕ್ರಿಕೆಟ್ ಸರಣಿ ನಡೆಯಬೇಕಿತ್ತು. ಆದರೆ ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಪಾಕ್ ಭಯೋತ್ಪಾದಕರು ದಾಳಿ ನಡೆಸಿದ ನಂತರ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿದ್ದು, ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಪಂದ್ಯಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. 
ಭಯೋತ್ಪಾದಕರು ಆಶ್ರಯ ಪಡೆದಿರುವ ರಾಷ್ಟ್ರದೊಂದಿಗೆ ಸೌಹಾರ್ದಯುತ ಪಂದ್ಯ ಆಡಲು ಸಾಧ್ಯವಿಲ್ಲ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನದ ವಿರುದ್ಧ ತೀಕ್ಷ್ಣ ಮಾತುಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.