ಕ್ರಿಕೆಟ್

ಕಳಪೆ ಫೀಲ್ಡಿಂಗ್: ಭಾರತಕ್ಕೆ 197 ರನ್‍ಗಳ ಬೃಹತ್ ಗುರಿ ನೀಡಿದ ಕಿವೀಸ್

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 196 ರನ್ ಪೇರಿಸಿದೆ...

ಕಳಪೆ ಫೀಲ್ಡಿಂಗ್: ಭಾರತಕ್ಕೆ 197 ರನ್‍ಗಳ ಬೃಹತ್ ಗುರಿ ನೀಡಿದ ಕಿವೀಸ್
ನ್ಯೂಜಿಲೆಂಡ್
Published On :
ರಾಜ್ಕೋಟ್: ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 196 ರನ್ ಪೇರಿಸಿದೆ. 
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕಿವೀಸ್ ಆರಂಭಿಕ ಆಟಗಾರ ಕೊಲಿನ್ ಮನ್ರೋ ಭರ್ಜರಿ ಶತಕದೊಂದಿಗೆ ತಂಡ 196 ರನ್ ಪೇರಿಸಿದ್ದು ಭಾರತಕ್ಕೆ ಗೆಲ್ಲಲು 197 ರನ್ ಗಳ ಬೃಹತ್ ಗುರಿಯನ್ನು ನೀಡಿದೆ. 
ಟೀಂ ಇಂಡಿಯಾದ ಕಳಪೆ ಫಿಲ್ಡೀಂಗ್ ಪ್ರದರ್ಶನದಿಂದಾಗಿ ನ್ಯೂಜಿಲೆಂಡ್ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. ಕೊಲಿನ್ ಮನ್ರೋ ಅವರಿಗೆ ಟೀಂ ಇಂಡಿಯಾ ಆಟಗಾರರು ನಾಲ್ಕು ಜೀವದಾನಗಳನ್ನು ನೀಡಿದರು. ಇದರಿಂದಾಗಿ ಮನ್ರೋ 58 ಎಸೆತಗಳಲ್ಲಿ ಭರ್ಜರಿ 7 ಸಿಕ್ಸರ್ 7 ಬೌಂಡರಿ ಸೇರಿದಂತೆ ಅಜೇಯ 109 ರನ್ ಸಿಡಿಸಿದರು. 
ನ್ಯೂಜಿಲೆಂಡ್ ಪರ ಮಾರ್ಟಿನ್ ಗುಪ್ಟಿಲ್ 45, ಕೇನ್ ವಿಲಿಯಮಸನ್ 16, ಬ್ರೂಸ್ 18 ರನ್ ಗಳಿಸಿದ್ದಾರೆ. 
ಭಾರತ ಪರ ಮೊಹಮ್ಮದ್ ಸಿರಾಜ್ ಮತ್ತು ಯಜುವೇಂದ್ರ ಚಹಾಲ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.