ಅಪರೂಪದ ಸಾಧನೆ: ಒಂದೇ ಪಂದ್ಯದಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಸ್ಟಾರ್ಕ್
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಒಂದು ಸಾಧನೆ ಮಾಡಿದ್ದಾರೆ. ಒಂದೇ ಪಂದ್ಯದಲ್ಲಿ ಎರಡೆರಡು ಬಾರಿ ಹ್ಯಾಟ್ರಿಕ್...

Published On :
ಸಿಡ್ನಿ(ಆಸ್ಟ್ರೇಲಿಯಾ): ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಒಂದು ಸಾಧನೆ ಮಾಡಿದ್ದಾರೆ. ಒಂದೇ ಪಂದ್ಯದಲ್ಲಿ ಎರಡೆರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ವಿನೂತನ ಸಾಧನೆ ಮಾಡಿದ್ದಾರೆ.
ಶೆಫೆಲ್ಡ್ ಶೀಲ್ಡ್ ಟೂರ್ನಿಯಲ್ಲಿ ನ್ಯೂ ಸೌಥ್ ವೇಲ್ಸ್ ತಂಡದ ಪರ ಆಡುತ್ತಿರುವ ಮಿಚೆಲ್ ಸ್ಟಾರ್ಕ್ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ ಒಮ್ಮೆ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್ ವಿಕೆಟ್ ಕೀಳುವ ಮೂಲಕ ಈ ವಿನೂತನ ದಾಖಲೆ ನಿರ್ಮಿಸಿದ್ದಾರೆ.
ಮಿಚೆಲ್ ಸ್ಟಾರ್ಕ್ ಮಾರಕ ದಾಳಿಯಿಂದಾಗಿ ನ್ಯೂ ಸೌಥ್ ವೇಲ್ಸ್ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ 171 ರನ್ ಗಳಿಂದ ಗೆಲುವು ಸಾಧಿಸಿದೆ.
ಇನ್ನು ಮಿಚೆಲ್ ಸ್ಟಾರ್ಕ್ ಗೂ ಮುನ್ನ ಭಾರತದ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1963ರಲ್ಲಿ ಸರ್ವೀಸಸ್ ಹಾಗೂ ಉತ್ತರ ಪಂಜಾಬ್ ನಡುವಿನ ಪಂದ್ಯದಲ್ಲಿ ಜೋಗಿಂದರ್ ರಾವ್ ಎರಡೆರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾAustraliaHistoryಇತಿಹಾಸMitchell Starcಮಿಚೆಲ್ ಸ್ಟಾರ್ಕ್Cricket Offbeatಕ್ರಿಕೆಟ್ ಸ್ವಾರಸ್ಯhat-tricksಹ್ಯಾಟ್ರಿಕ್ ವಿಕೆಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


