ಎಲ್ಲಾ ತಿಳಿದಿದ್ದರೂ ಎಂಎಸ್ ಧೋನಿ, ರಾಹುಲ್ ದ್ರಾವಿಡ್ ನನ್ನ ಬೆಂಬಲಿಸಲಿಲ್ಲ: ಶ್ರೀಶಾಂತ್ ಕಿಡಿ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪದಿಂದ ನಿಷೇಧ ಎದುರಿಸುತ್ತಿರುವ ಎನ್. ಶ್ರೀಶಾಂತ್ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ...

Published On :
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪದಿಂದ ನಿಷೇಧ ಎದುರಿಸುತ್ತಿರುವ ಎನ್. ಶ್ರೀಶಾಂತ್ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಹಾಗೂ ಎಂ.ಎಸ್.ಧೋನಿ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನನಗೆ ಅಗತ್ಯವಿದ್ದಾಗ ನಾಯಕರುಗಳಿಂದ ನೆರವು ಸಿಗಲಿಲ್ಲ. ಟೀಂ ಇಂಡಿಯಾ ಕ್ಯಾಪ್ಟನ್ ಆಗಿದ್ದ ಧೋನಿಯವರಿಗೆ ಭಾವನಾತ್ಮಕ ಸಂದೇಶ ರವಾನೆ ಮಾಡಿದ್ರೂ ಯಾವುದೇ ಉತ್ತರ ಸಿಗಲಿಲ್ಲ ಎಂದು ಶ್ರೀಶಾಂತ್ ಆರೋಪಿಸಿದ್ದಾರೆ,
ರಾಜಸ್ಥಾನ ರಾಯಲ್ಸ್ ತಂಡದ ಮೆಂಟರ್ ಆಗಿದ್ದ ರಾಹುಲ್ ದ್ರಾವಿಡ್ ಗೆ ನನ್ನ ಪರ ನಿಲ್ಲುವಂತೆ ಮನವಿ ಮಾಡಿಕೊಂಡರೂ ಅವರು ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.
ಫಿಕ್ಸಿಂಗ್ ವೇಳೆ ಟೀಂ ಇಂಡಿಯಾದ ಟಾಪ್ 10ರಲ್ಲಿದ್ದ ಆರು ಕ್ರಿಕೆಟರ್ಸ್ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಆದರೆ ಭಾರತೀಯ ಕ್ರಿಕೆಟ್ ಮೇಲೆ ಪರಿಣಾಮ ಬೀರುವ ಕಾರಣ ಆಟಗಾರರ ಹೆಸರನ್ನು ಬಹಿರಂಗಗೊಳಿಸದಂತೆ ಬಿಸಿಸಿಐ ಮನವಿ ಮಾಡಿಕೊಂಡಿತ್ತು.
ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲವೇ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದ ಬಿಸಿಸಿಐ, ಅವರ ಬೆನ್ನಿಗೆ ನಿಂತಿದ್ಯಾಕೆ ಎಂದು ಶ್ರೀಶಾಂತ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಐಪಿಎಲ್ ಸ್ಪಾಟ್ ಫಿಕ್ಸಿಂಗ್MS Dhoniಎಂ.ಎಸ್ ಧೋನಿಬೆಂಬಲRahul Dravidರಾಹುಲ್ ದ್ರಾವಿಡ್S Sreesanthಎಸ್. ಶ್ರೀಶಾಂತ್supportingIPL spot-fixing case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


