ವಿರಾಟ್ ಕೊಹ್ಲಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್ ಗಳಿಂದ ರೋಚಕ ಜಯ ಗಳಿಸಿದ್ದು, ತಂಡದ ನಾಯಕ ವಿರಾಟ್...

Published On :
ತಿರುವನಂತಪುರಂ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್ ಗಳಿಂದ ರೋಚಕ ಜಯ ಗಳಿಸಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿಗೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಮಳೆಯಿಂದಾಗಿ ಪಂದ್ಯ ಲೇಟಾಗಿ ಪ್ರಾರಂಭವಾಯಿತು. ಹೀಗಾಗಿ ಉಭಯ ತಂಡಕ್ಕೆ ಕೇವಲ 8 ಓವರ್ ಗಳನ್ನು ನೀಡಲಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಮಾತ್ರ ಗಳಿಸಲು ಶಕ್ತವಾಯಿತು. 68 ರನ್ ಗಳ ಸುಲಭ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 8 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 61 ರನ್ ಗಳನ್ನು ಪೇರಿಸಿ ಭಾರತಕ್ಕೆ 6 ರನ್ ಗಳಿಂದ ಶರಣಾಯಿತು.
ನ್ಯೂಜಿಲೆಂಡ್ಗೆ ಅಂತಿಮ ಓವರ್ ನಲ್ಲಿ ಗೆಲ್ಲಲು 19 ರನ್ ಗಳ ಅವಶ್ಯಕತೆ ಇತ್ತು. ಹೀಗಾಗಿ ಕೊಹ್ಲಿ ಪಾಂಡ್ಯಗೆ ಬೌಲಿಂಗ್ ಮಾಡಲು ಹೇಳಿದರು. ಆದರೆ ಕೊಹ್ಲಿಗೆ ಮಾತ್ರ ಆತಂಕ ಕಡಿಮೆಯಾಗಿರಲಿಲ್ಲ. ಹಾರ್ದಿಕ್ ಪಾಂಡ್ಯ ಎಲ್ಲಿ ರನ್ ಗಳನ್ನು ನೀಡುತ್ತಾರೋ ಎಂದು ಹೆದರಿದ್ದ ಕೊಹ್ಲಿ ಹತ್ತಿರ ಬಂದ ಹಾರ್ದಿಕ್ ನೀವು ಹೆದರಬೇಡಿ ನಾನು ಚೆನ್ನಾಗಿ ಬೌಲಿಂಗ್ ಮಾಡುವೆ ಎಂದು ಧೈರ್ಯ ತುಂಬಿದ್ದರು. ಅದರಂತೆ ಹಾರ್ದಿಕ್ ಪಾಂಡ್ಯ ಕೊಹ್ಲಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಈ ವಿಚಾರವನ್ನು ಸ್ವತಃ ವಿರಾಟ್ ಕೊಹ್ಲಿ ಪಂದ್ಯ ಮುಕ್ತಾಯವಾದ ಬಳಿಕ ನಡೆದ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿHardik Pandyaಹಾರ್ದಿಕ್ ಪಾಂಡ್ಯCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


