ಕ್ರಿಕೆಟ್

ಟೀಂ ಇಂಡಿಯಾ ಆಟಗಾರರಿಗೆ ಸಿಹಿ ಸುದ್ದಿ: ಬ್ಯುಸಿನೆಸ್ ಕ್ಲಾಸ್‍ ವಿಮಾನಯಾನಕ್ಕೆ ಬಿಸಿಸಿಐ ಒಪ್ಪಿಗೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಗೆ ಸಿಹಿ ಸುದ್ದಿ ನೀಡಿದ್ದು, ದೇಶಿಯ ವಿಮಾನದಲ್ಲಿ ಬ್ಯುಸಿನೆಸ್...

ಟೀಂ ಇಂಡಿಯಾ ಆಟಗಾರರಿಗೆ ಸಿಹಿ ಸುದ್ದಿ: ಬ್ಯುಸಿನೆಸ್ ಕ್ಲಾಸ್‍ ವಿಮಾನಯಾನಕ್ಕೆ ಬಿಸಿಸಿಐ ಒಪ್ಪಿಗೆ
ಟೀಂ ಇಂಡಿಯಾ
Published On :
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಗೆ ಸಿಹಿ ಸುದ್ದಿ ನೀಡಿದ್ದು, ದೇಶಿಯ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿದೆ. 
ಸಾಮಾನ್ಯ ಕ್ಲಾಸ್ ನಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿಳುತ್ತಿದ್ದು ಇದರಿಂದ ತಮಗೆ ಮುಜುಗರವಾಗುತ್ತಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಬಿಸಿಸಿಐ ಮುಂದೆ ಅವಲತ್ತು ತೊಡಿಕೊಂಡಿದ್ದರು. ಆಟಗಾರರಿಗೆ ಆಗುತ್ತಿರುವ ಮುಜುಗರವನ್ನು ತಪ್ಪಿಸುವ ಸಲುವಾಗಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. 
ದೆಹಲಿಯಲ್ಲಿ ನಡೆದ ಸುಪ್ರೀಂಕೋರ್ಟ್ ನೇಮಿಸಿರುವ ನಿರ್ವಾಹಕ ಸಮಿತಿ(ಸಿಒಎ) ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸಿಕೆ ಖನ್ನಾ ಹೇಳಿದ್ದಾರೆ. 
ಇನ್ನು ದೇಶೀಯ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುವ ಮೂಲಕ ಭಾರತೀಯ ಕ್ರಿಕೆಟಿಗರು ಆರಾಮದಾಯಕ ಪ್ರಯಾಣದ ಸುಖವನ್ನು ಅನುಭವಿಸಲಿದ್ದಾರೆ ಎಂದು ಸಿಕೆ ಖನ್ನಾ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.