ಲಂಕಾ ಸರಣಿಯಿಂದ ವಿಶ್ರಾಂತಿ ನೀಡುವಂತೆ ಸ್ವತಃ ನಾನೇ ಕೇಳಿದ್ದೆ: ಹಾರ್ದಿಕ್ ಪಾಂಡ್ಯ
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ವಿಶ್ರಾಂತಿ ನೀಡುವಂತೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಮನವಿ ಮಾಡಿದ್ದಾಗಿ ಹಾರ್ದಿಕ್ ಪಾಂಡ್ಯ ಬಹಿರಂಗಪಡಿಸಿದ್ದಾರೆ...

Published On :
ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ವಿಶ್ರಾಂತಿ ನೀಡುವಂತೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಮನವಿ ಮಾಡಿದ್ದಾಗಿ ಹಾರ್ದಿಕ್ ಪಾಂಡ್ಯ ಬಹಿರಂಗಪಡಿಸಿದ್ದಾರೆ.
ಚಾಂಪಿಯನ್ ಟ್ರೋಫಿ ಬಳಿಕ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಪರ 33 ಪಂದ್ಯಗಳ ಪೈಕಿ 30 ಪಂದ್ಯಗಳನ್ನು ಆಡಿದ್ದು ಈ ಹಿನ್ನೆಲೆಯಲ್ಲಿ ವಿಶಾಂತ್ರಿ ನೀಡುವಂತೆ ಮ್ಯಾನೇಜ್ ಮೆಂಟ್ ಗೆ ಮನವಿ ಮಾಡಿದ್ದಾಗಿ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಉತ್ತಮ ಫಾರ್ಮ್ ನಲ್ಲಿರುವ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಆಯ್ಕೆ ಸಮಿತಿ ಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ನೀಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಹಾರ್ದಿಕ್ ಪಾಂಡ್ಯ ನಾನು ಪ್ರತಿಶತ ನೂರರಷ್ಟು ಫಿಟ್ ಆಗಿಲ್ಲ ಎಂದು ನನಗನಿಸುತ್ತಿದೆ. ನಾನಿನ್ನೂ ಸಾಕಷ್ಟು ಕ್ರಿಕೆಟ್ ಆಡಬೇಕಿದೆ. ಸಂಪೂರ್ಣವಾಗಿ ಫಿಟ್ ಆಗಿದ್ದರೆ ಮಾತ್ರ ನಾನು ಮೈದಾನದಲ್ಲಿ ನೂರಕ್ಕೆ ನೂರರಷ್ಟು ಪರಿಶ್ರಮ ಹಾಕಲು ಸಾಧ್ಯ ಎಂದು ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ವಿಶ್ರಾಂತಿಯಿಂದಾಗಿ ನಾನು ಜಿಮ್ ನಲ್ಲಿ ಹೆಚ್ಚಿನ ಸಮಯ ಕಳೆಯುವ ಮೂಲಕ ನನ್ನ ಫಿಟ್ನೆಸ್ ಅನ್ನು ಮತ್ತಷ್ಟು ಸುಧಾರಿಸಿಕೊಳ್ಳುತ್ತೇನೆ. ಜತೆಗೆ ಮುಂಬರುವ ದಕ್ಷಿಣ ಆಫ್ರಿಕಾ ಸರಣಿ ಆಡಲು ಕಾತುರನಾಗಿದ್ದೇನೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯೂ ನಿಜಕ್ಕೂ ಪ್ರತಿಷ್ಠೆಯ ಕಣವಾಗಲಿದೆ. ಜೀವನದಲ್ಲಿ ಸವಾಲುಗಳನ್ನು ಎದುರಿಸಲು ನಾನು ಇಷ್ಟಪಡುತ್ತೇನೆ. ನಾವು ಎದುರಿಸುವ ಸವಾಲುಗಳು ನಮ್ಮನ್ನು ಉತ್ತುಂಗಕ್ಕೇರಿಸಲು ಸಹಕಾರಿಯಾಗುತ್ತವೆ. ಆಫ್ರಿಕಾದಲ್ಲಿ ನಾನು ಉತ್ತಮವಾಗಿ ಆಡುತ್ತೇನೆ ಎಂಬ ಭರವಸೆ ಇದೆ ಎಂದು ಪಾಂಡ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


