ಕನ್ನಡಿಗ ವೆಂಕಟೇಶ್ ಪ್ರಸಾದ್ ಬಿಸಿಸಿಐನ ಕ್ರಿಕೆಟ್ ಕಾರ್ಯಾಚರಣೆಗಳ ಪ್ರಧಾನ ವ್ಯವಸ್ಥಾಪಕ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಕ್ರಿಕೆಟ್ ಕಾರ್ಯಾಚರಣೆಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಟೀಂ ಇಂಡಿಯದ ಮಾಜಿ...

Published On :
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಕ್ರಿಕೆಟ್ ಕಾರ್ಯಾಚರಣೆಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಟೀಂ ಇಂಡಿಯದ ಮಾಜಿ ವೇಗಿ, ಕರ್ನಾಟಕದ ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಯಿದೆ.
ಪ್ರಸ್ತುತ ಟೀಂ ಇಂಡಿಯಾ ಕಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿರುವ ಪ್ರಸಾದ್ ಅವರು ಈ ಹುದ್ದೆಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಎಂವಿ ಶ್ರೀಧರ್ ಅವರ ನಿಧನದಿಂದ ಈ ಸ್ಥಾನ ತೆರವಾಗಿದ್ದು ಬಿಸಿಸಿಐ ಯೋಗ್ಯರ ಹುಡುಕಾಟದಲ್ಲಿ ತೊಡಗಿತ್ತು. ಟೀಂ ಇಂಡಿಯಾ ಪರವಾಗಿ ಆಡಿರುವ ವೆಂಕಟೇಶ್ ಪ್ರಸಾದ್ 33 ಟೆಸ್ಟ್ ಮತ್ತು 161 ಏಕದಿನ ಪಂದ್ಯಗಳನ್ನು ಆಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


