ಕೋಲ್ಕತ್ತಾ ಟೆಸ್ಟ್: ಒಂದೇ ಪಂದ್ಯದಲ್ಲಿ ಕೆಎಲ್ ರಾಹುಲ್ 'ಗೋಲ್ಡನ್ ಡಕ್', ಕೊಹ್ಲಿ 'ಡಕ್ ಔಟ್'
ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಮಳೆಯ ಅಡ್ಡಿಯಿಂದಾಗಿ 3 ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿದೆ...

Published On :
ಕೋಲ್ಕತ್ತಾ: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಮಳೆಯ ಅಡ್ಡಿಯಿಂದಾಗಿ 3 ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಮಳೆಯ ಕಾರಣದಿಂದಾಗಿ ಕೇವಲ 12 ಓವರ್ ಗಳು ಮಾತ್ರ ನಡೆಯಿತು. ಟೀಂ ಇಂಡಿಯಾ ಪರ ಮೊದಲು ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಮೊದಲ ಎಸೆತದಲ್ಲೇ ಔಟ್ ಆಗುವ ಮೂಲಕ ಗೋಲ್ಡನ್ ಡಕ್ ಔಟ್ ಅಪಖ್ಯಾತಿಗೆ ಭಾಜನರಾದರು.
ಆರಂಭಿಕರಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ 8 ರನ್ ಗಳಿಸಿ ಔಟಾದರೆ, ತಂಡದ ನಾಯಕ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರು. ಇದರೊಂದಿಗೆ ಒಂದೇ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಡಕ್ ಔಟ್ ಹಾಕಿದ್ದಾರೆ.
ಪ್ರಸ್ತುತ ಚೇತೇಶ್ವರ ಪೂಜಾರ ಅಜೇಯ 8 ರನ್ ಹಾಗೂ ಅಜಿಂಕ್ಯ ರಹಾನೆ ಅಜೇಯ 0 ಗಳಿಸಿ ಕ್ರೀಸ್ ನಲ್ಲಿದ್ದಾರೆ. ಸದ್ಯ ಮಂದ ಬೆಳಕಿನ ಕಾರಣ ಪಂದ್ಯ ಸ್ಥಗಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿKL Rahulಕೆಎಲ್ ರಾಹುಲ್Kolkata TestGolden Duck Outಕೊಲ್ಕತ್ತಾ ಟೆಸ್ಟ್ಗೋಲ್ಡನ್ ಡಕ್ ಔಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


