ಕ್ರಿಕೆಟ್

ಮೊದಲ ಟೆಸ್ಟ್: ಧವನ್, ಕೆಎಲ್ ರಾಹುಲ್ ಅರ್ಧಶತಕ, 2ನೇ ಇನ್ನಿಂಗ್ಸ್‌ನಲ್ಲಿ ಭಾರತ 171/1

ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನ ನಾಲ್ಕನೇ ದಿನದಾಟದಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು...

ಮೊದಲ ಟೆಸ್ಟ್: ಧವನ್, ಕೆಎಲ್ ರಾಹುಲ್ ಅರ್ಧಶತಕ, 2ನೇ ಇನ್ನಿಂಗ್ಸ್‌ನಲ್ಲಿ ಭಾರತ 171/1
ಶಿಖರ್ ಧವನ್-ಕೆಎಲ್ ರಾಹುಲ್
Published On :
ಕೋಲ್ಕತಾ: ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನ ನಾಲ್ಕನೇ ದಿನದಾಟದಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು 49 ರನ್ ಗಳ ಮುನ್ನಡೆ ಸಾಧಿಸಿದೆ.  
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 172 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾ ತಂಡ 294 ರನ್ ಗಳಿಗೆ ಆಲ್ ಔಟ್ ಆಗಿತ್ತು. ಇದರೊಂದಿಗೆ ಭಾರತದ ವಿರುದ್ಧ 122 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಾಧಿಸಿತು. 
ಎರಡನೇ ಇನ್ನಿಂಗ್ಸ್ ಆರಂಭಿಸಿದ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಉತ್ತಮ ಬುನಾದಿ ಹಾಕಿಕೊಟ್ಟರು. ಈ ಇಬ್ಬರ ಜತೆಯಾಟದಲ್ಲಿ 166 ರನ್ ಅರಿದು ಬಂದಿತು. 94 ರನ್ ಗಳಿಸಿದ್ದ ಶಿಖರ್ ಧವನ್ ಶತಕದ ಅಂಚಿನಲ್ಲಿ ಯಡವಿದರು. ಶನಕ ಎಸೆತದಲ್ಲಿ ಕೀಪರ್ ಡಿಕ್ವೆಲ್ಲಾಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. 
ಸದ್ಯ ಕ್ರೀಸ್ ನಲ್ಲಿ 73 ರನ್ ಗಳಿಸಿರುವ ಕೆಎಲ್ ರಾಹುಲ್ ಹಾಗೂ 2 ರನ್ ಗಳಿಸಿ ಚೇತೇಶ್ವರ ಪೂಜಾರ ಐದನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.