352 ರನ್ ಗಳಿಸಿ ಭಾರತ ಇನ್ನಿಂಗ್ಸ್ ಡಿಕ್ಲೇರ್, ಶ್ರೀಲಂಕಾಗೆ 35 ಓವರ್ ನಲ್ಲಿ 231 ರನ್ ಗುರಿ
ಈಡನ್ ಗಾರ್ಡನ್ ನಲ್ಲಿ ನಡೆಯುಚ್ಚಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 352 ರನ್ ಗಳಿಸಿ ತನ್ನ ಎರಡನೇ ಇನ್ನಿಂಗ್ಸ್ ಗಳನ್ನು ಡಿಕ್ಲೇರ್ ಮಾಡಿಕೊಂಡಿದ್ದು, ಲಂಕಾಗೆ ಗೆಲ್ಲಲು 231 ರನ್ ಗಳ ಸವಾಲಿನ ಗುರಿ ನೀಡಿದೆ.

Published On :
ಕೋಲ್ಕತಾ: ಈಡನ್ ಗಾರ್ಡನ್ ನಲ್ಲಿ ನಡೆಯುಚ್ಚಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 352 ರನ್ ಗಳಿಸಿ ತನ್ನ ಎರಡನೇ ಇನ್ನಿಂಗ್ಸ್ ಗಳನ್ನು ಡಿಕ್ಲೇರ್ ಮಾಡಿಕೊಂಡಿದ್ದು, ಲಂಕಾಗೆ ಗೆಲ್ಲಲು 231 ರನ್ ಗಳ ಸವಾಲಿನ ಗುರಿ ನೀಡಿದೆ.
ಮಳೆ ಹಾಗೂ ಕಳಪೆ ಬ್ಯಾಟಿಂಗ್ ನಿಂದ ಮೊದಲ ಇನ್ನಿಂಗ್ಸ್ ನಲ್ಲಿ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ಎರಡನೇ ಇನ್ನಿಂಗ್ಸ್ ನಲ್ಲಿ ಶಿಖರ್ ಧವನ್ (94 ರನ್), ಕೆಎಲ್ ರಾಹುಲ್ (74 ರನ್) ಹಾಗೂ ನಾಯಕ ಕೊಹ್ಲಿ (ಅಜೆಯೇ 104 ರನ್) ಅವರ ಬ್ಯಾಟಿಂಗ್ ನೆರವಿನಿಂದ ಎರಡನೇ ಇನ್ನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆ ಮೂಲಕ ಶ್ರೀಲಂಕಾಗೆ ಗೆಲ್ಲಲು 231 ರನ್ ಗಳ ಸವಾಲಿನ ಗುರಿ ನೀಡಿತು.
ಇನ್ನು ಶ್ರೀಲಂಕಾ ಪರ ಮೊದಲ ಇನ್ನಿಂಗ್ಸ್ ನಲ್ಲಿ ಭಾರತವನ್ನು ಕಾಡಿದ್ದ ಲಕ್ಮಲ್ ಎರಡನೇ ಇನ್ನಿಂಗ್ಸ್ ನಲ್ಲೂ ಭಾರತೀಯ ಬ್ಯಾಟ್ಸಮನ್ ಗಳನ್ನು ಕಾಡಿದರು. ಕೇವಲ 26 ರನ್ ಗಳನ್ನು ನೀಡಿ ಪ್ರಮುಖ 4 ವಿಕೆಟ್ ಪಡೆದರು. ಉಳಿದಂತೆ ಗಮಾಗೆ, ಶಣಕ ಮತ್ತು ಪೆರೆರಾ ತಲಾ 2 ವಿಕೆಟ್ ಪಡೆದರು.
ಲಂಕೆಗೆ ಸವಾಲಿನ ಗುರಿ
ವಿಶೇಷವೆಂದರೆ ಭಾರತ ನೀಡಿರುವ ರನ್ ಗಳ ಗುರಿ ಶ್ರೀಲಂಕಾ ತಂಡಕ್ಕೆ ಸವಾಲಿನದ್ದಾಗಿದ್ದು, 231 ರನ್ ಗಳನ್ನು ಲಂಕಾ ಪಡೆ ಕೇವಲ 35 ಓವರ್ ಗಳಲ್ಲಿ ಗಳಿಸಬೇಕಿದೆ. ಅಂದರೆ 210 ಎಸೆತಗಳಲ್ಲಿ ಲಂಕಾ ತಂಡ 231 ರನ್ ಗಳನ್ನು ಪೇರಿಸಬೇಕಿದೆ. ಇಂದು ವಾತಾವರಣ ಕೂಡ ಆಟಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಇದೆ. ಹೀಗಾಗಿ ಲಂಕಾ ತಂಡ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದರೆ ಪಂದ್ಯ ಡ್ರಾ ಆಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


