ಒಂದೇ ಇನ್ನಿಂಗ್ಸ್‌ನಲ್ಲಿ 1 ದ್ವಿಶತಕ, 3 ಶತಕ ದಾಖಲೆ ಬರೆದ ಟೀಂ ಇಂಡಿಯಾ ಆಟಗಾರರು
ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಆಟಗಾರರಿಂದ 1 ದ್ವಿಶತಕ ಮತ್ತು 3 ಶತಕಗಳು ಹರಿಬಂದಿದೆ...

Published On :
ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಆಟಗಾರರಿಂದ 1 ದ್ವಿಶತಕ ಮತ್ತು 3 ಶತಕಗಳು ಹರಿಬಂದಿದೆ.
ನಾಗ್ಪುರದ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್ ನಲ್ಲಿ ಮುರಳಿ ವಿಜಯ್(128), ಚೇತೇಶ್ವರ ಪೂಜಾರ(143), ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ(213) ಹಾಗೂ ರೋಹಿತ್ ಶರ್ಮಾ ಅಜೇಯ 102 ರನ್ ಗಳಿಸಿದ್ದಾರೆ.
ಇನ್ನಿಂಗ್ಸ್ ವೊಂದರಲ್ಲಿ ಟೀಂ ಇಂಡಿಯಾ ಆಟಗಾರರು ನಾಲ್ಕು ಶತಕಗಳನ್ನು ಸಿಡಿಸಿರುವುದು ಇದು ಮೂರನೇ ಭಾರಿಗೆ. ಈ ಹಿಂದೆ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಟೆಸ್ಟ್ ಶತಕಗಳು ಹರಿದುಬಂದಿದ್ದವು. ಇದರಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರರು ಇನ್ನಿಂಗ್ಸ್ ವೊಂದರಲ್ಲಿ 5 ಶತಕ ಸಿಡಿಸಿದ್ದು ಅಗ್ರಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaSri Lankaಶ್ರೀಲಂಕಾVirat Kohliವಿರಾಟ್ ಕೊಹ್ಲಿCricket Offbeatಕ್ರಿಕೆಟ್ ಸ್ವಾರಸ್ಯNagpur Testನಾಗ್ಪುರ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


