ಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ; ರೋಹಿತ್ ಶರ್ಮಾ ನಾಯಕ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದ್ದು ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದ್ದು ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಘೋಷಿಸಿದೆ. ಇನ್ನು ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತು ಸಿದ್ಧಾರ್ಥ ಕೌಲ್ ರನ್ನು ಆಯ್ಕೆ ಮಾಡಲಾಗಿದೆ.
ಲಂಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿಯೇ ನಾಯಕತ್ವ ವಹಿಸಲಿದ್ದಾರೆ. ನಂತರ ಪ್ರಾರಂಭವಾಗಲಿರುವ ಏಕದಿನ ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಟೆಸ್ಟ್ ತಂಡ
ವಿರಾಟ್ ಕೊಹ್ಲಿ, ಮುರಳಿ ವಿಜಯ್, ಕೆಎಲ್ ರಾಹುಲ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ವಿಜಯ್ ಶಂಕರ್.
ಏಕದಿನ ತಂಡ
ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜವೇಂದ್ರ ಚಹಾಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaSri Lankaಶ್ರೀಲಂಕಾVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


