ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಪೂಜಾರ ಬಡ್ತಿ, 5ನೇ ಸ್ಥಾನದಲ್ಲೇ ಉಳಿದ ಕೊಹ್ಲಿ
ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೆ...

Published On :
ದುಬೈ: ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. 941 ಅಂಕಗಳೊಂದಿಗೆ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿದ್ದು 888 ಅಂಕಗಳೊಂದಿಗೆ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. 881 ಅಂಕಗಳೊಂದಿಗೆ ಜೋ ರೂಟ್ ಹಾಗೂ ಕೇನ್ ವಿಲಿಯಮ್ಸನ್ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ. 877 ಅಂಕಗಳೊಂದಿಗೆ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಆ್ಯಂಡ್ರಸನ್ 891 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ 880 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಕಾಗಿಸೋ ರಬಡಾ 3ನೇ ಹಾಗೂ ರವಿಚಂದ್ರನ್ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.
ಇನ್ನು ಟೆಸ್ಟ್ ಆಲ್ರೌಂಡರ್ ವಿಭಾಗದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 437 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಟೀಂ ಇಂಡಿಯಾದ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


