ಆರ್ ಅಶ್ವಿನ್ ಈಗ ವಿಶ್ವದ ಅತ್ಯಂತ ಶ್ರೇಷ್ಠ ಸ್ಪಿನ್ನರ್: ಮುರಳೀಧರನ್
ಈಗಿರುವವರ ಪೈಕಿ ಆರ್ ಅಶ್ವಿನ್ ವಿಶ್ವದ ಅತ್ಯಂತ ಶ್ರೇಷ್ಠ ಸ್ಪಿನ್ನರ್ ಎಂದು ಶ್ರೀಲಂಕಾ ತಂಡದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.

Published On :
ನವದೆಹಲಿ: ಈಗಿರುವವರ ಪೈಕಿ ಆರ್ ಅಶ್ವಿನ್ ವಿಶ್ವದ ಅತ್ಯಂತ ಶ್ರೇಷ್ಠ ಸ್ಪಿನ್ನರ್ ಎಂದು ಶ್ರೀಲಂಕಾ ತಂಡದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧದ 2 ನೇ ಟೆಸ್ಟ್ ನಲ್ಲಿ ಆರ್ ಅಶ್ವಿನ್ ಅತ್ಯಂತ ವೇಗವಾಗಿ 300 ಟೆಸ್ಟ್ ವಿಕೆಟ್ ಗಳನ್ನು ಪಡೆಯುವ ಮೂಲಕ ಡೆನ್ನಿಸ್ ಲಿಲ್ಲಿ ಅವರ ದಾಖಲೆ ಸರಿಗಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲೆಜೆಂಡರಿ ಆಫ್ ಸ್ಪಿನ್ ಮುತ್ತಯ್ಯ ಮುರಳೀಧರನ್, ಅಶ್ವಿನ್ ಗೆ ಅಭಿನಂದನೆ ಸಲ್ಲಿಸಿದ್ದು, 300 ವಿಕೆಟ್ ಗಳನ್ನು ಪಡೆಯುವುದು ಸುಲಭದ ಕೆಲಸವಲ್ಲ, ಖಂಡಿತವಾಗಿಯೂ ಅವರು ಈಗಿರುವವರ ಪೈಕಿ ವಿಶ್ವದ ಅತ್ಯಂತ ಶ್ರೇಷ್ಠ ಸ್ಪಿನ್ನರ್ ಎಂದಿದ್ದಾರೆ.
ಏಕದಿನ ಪಂದ್ಯಗಳಲ್ಲಿ ಅಶ್ವಿನ್ ಇಲ್ಲದೇ ಇರಬಹುದು, ಆದರೆ ಚುಟುಕು ಸ್ವರೂಪದ ಪಂದ್ಯಗಳಲ್ಲಿ ಅಶ್ವಿನ್ ಮತ್ತೆ ಲಯ ಕಂಡುಕೊಳ್ಳಲಿದ್ದು ಅದ್ಭುತಗಳನ್ನು ಸೃಷ್ಟಿಸಲಿದ್ದಾರೆ ಎಂದು ಮುತ್ತಯ್ಯ ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ. ಆಸ್ಟ್ರೇಲಿಯಾ ಬೌಲರ್ ಲಿಲ್ಲಿ 56 ಪಂದ್ಯಗಳಲ್ಲಿ 300 ವಿಕೆಟ್ ಪಡೆದು ಅತ್ಯಂತ ವೇಗವಾಗಿ 300 ಟೆಸ್ಟ್ ವಿಕೆಟ್ ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ 54 ನೇ ಪಂದ್ಯದಲ್ಲಿ 300 ಟೆಸ್ಟ್ ವಿಕೆಟ್ ಗಳನ್ನು ಪಡೆಯುವ ಮೂಲಕ ಡೆನ್ನಿಸ್ ಲಿಲ್ಲಿ ಅವರ ದಾಖಲೆಯನ್ನು ಆರ್ ಅಶ್ವಿನ್ ಸರಿಗಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆರ್ ಅಶ್ವಿನ್Ravichandran AshwinMuttiah Muralitharanಮುತ್ತಯ್ಯ ಮುರಳೀಧರನ್best spinner remarksಶ್ರೇಷ್ಠ ಸ್ಪಿನ್ನರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


