ಹಿರಿಯ ಕ್ರಿಕೆಟಿಗ ಆಶಿಶ್ ನೆಹ್ರಾ ಜತೆ ಮತ್ತೆ ಆಡುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ: ಬೂಮ್ರಾ
ಕ್ರಿಕೆಟ್ ನಲ್ಲಿ ಅಪಾರ ಅನುಭವ ಹೊಂದಿರುವ ವೇಗಿ ಆಶಿಶ್ ನೆಹ್ರಾ ಅವರೊಂದಿಗೆ ಆಡುವುದಕ್ಕೆ ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಡೆತ್ ಬೌಲ್ ಸ್ಪೆಷಲಿಸ್ಟ್ ಬಲಗೈ...

Published On :
ರಾಂಚಿ: ಕ್ರಿಕೆಟ್ ನಲ್ಲಿ ಅಪಾರ ಅನುಭವ ಹೊಂದಿರುವ ವೇಗಿ ಆಶಿಶ್ ನೆಹ್ರಾ ಅವರೊಂದಿಗೆ ಆಡುವುದಕ್ಕೆ ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಡೆತ್ ಬೌಲ್ ಸ್ಪೆಷಲಿಸ್ಟ್ ಬಲಗೈ ವೇಗಿ ಜಸ್ ಪ್ರೀತ್ ಬೂಮ್ರಾ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ನಾಳೆಯಿಂದ ಆರಂಭಗೊಳ್ಳಲಿದೆ. ಇನ್ನು ಟೀಂ ಇಂಡಿಯಾದಲ್ಲಿ ಹಿರಿಯ ಆಟಗಾರ ಆಶಿಶ್ ನೆಹ್ರಾ ಅವರ ಪುನರಾಗಮನವಾಗಿದೆ. ಅಪಾರ ಅನುಭವ ಹೊಂದಿರುವ ನೆಹ್ರಾರಿಂದ ಕ್ರಿಕೆಟ್ ಪಾಠ ಕಲಿಯುವುದಕ್ಕೆ ಹೆಚ್ಚು ಉತ್ಸುಕನಾಗಿದ್ದೇನೆ ಬೂಮ್ರಾ ಹೇಳಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್, ಸೌರವ್ ಗಂಗೂಲಿ ಮತ್ತು ಎಂಎಸ್ ಧೋನಿ ಅವರಂತ ಅನುಭವಿ ನಾಯಕತ್ವದಲ್ಲಿ ಆಡಿರುವ ಆಶಿಶ್ ನೆಹ್ರಾ ಅವರಿಂದ ಕೆಲ ಉಪಯುಕ್ತ ಸಲಹೆ ಸಿಗಬಹುದು ಎಂಬ ಭರವಸೆ ವ್ಯಕ್ತಪಡಿಸಿದರು.
ಟಿ20 ಪಂದ್ಯ ನಡೆಯುವ ಸ್ಥಳಗಳು:
ಅಕ್ಟೋಬರ್ 7ರಂದು ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣ ರಾಂಚಿ.
ಅಕ್ಟೋಬರ್ 10ರಂದು ಬರ್ಸಾಪುರಾ ಕ್ರೀಡಾಂಗಣ ಗುವಾಹಟಿ.
ಅಕ್ಟೋಬರ್ 13ರಂದು ರಾಜೀವ್ ಗಾಂಧಿ ಕ್ರೀಡಾಂಗಣ ಹೈದರಾಬಾದ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaAshish NehraJasprit Bumrahಆಶಿಶ್ ನೆಹ್ರಾಜಸ್ ಪ್ರೀತ್ ಬೂಮ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


