ಟಿ20 ಕ್ರಿಕೆಟ್: ಟೀಂ ಇಂಡಿಯಾ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಬೂಮ್ರಾ
ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ...

Published On :
ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಟೀಂ ಇಂಡಿಯಾದ ಖ್ಯಾತ ಸ್ಪಿನ್ ಬೌಲರ್ ಆರ್ ಅಶ್ವಿನ್ ಸದ್ಯ 52 ವಿಕೆಟ್ ಪಡೆಯುದರೊಂದಿಗೆ ಅಗ್ರಸ್ಥಾನದಲ್ಲಿದ್ದು 36 ವಿಕೆಟ್ ಪಡೆಯುವ ಮೂಲಕ ಬೂಮ್ರಾ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಟೀಂ ಇಂಡಿಯಾ ಪರ ಆಶಿಶ್ ನೆಹ್ರಾ 34, ರವೀಂದ್ರ ಜಡೇಜಾ 31, ಇರ್ಫಾನ್ ಪಠಾಣ್ ಮತ್ತು ಯುವರಾಜ್ ಸಿಂಗ್ ತಲಾ 28 ವಿಕೆಟ್ ಪಡೆದು ಮೊದಲ ಐದು ಸ್ಥಾನದಲ್ಲಿದ್ದಾರೆ.
ಬೂಮ್ರಾ ಇದುವರೆಗೂ 26 ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದು 36 ವಿಕೆಟ್ ಪಡೆದಿದ್ದಾರೆ. ರಾಂಚಿಯಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಬೂಮ್ರಾ 3 ಓವರ್ ನಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


