ತಂಡಕ್ಕೆ ಮರಳಿದ ಬೆನ್ನಲ್ಲೇ ಕ್ರಿಕೆಟ್‌ಗೆ ಆಶಿಶ್ ನೆಹ್ರಾ ವಿದಾಯ?
ಟೀಂ ಇಂಡಿಯಾದ ಎಡಗೈ ವೇಗಿ ಆಶಿಶ್ ನೆಹ್ರಾ ಇತ್ತೀಚೆಗಷ್ಟೇ ಟೀಂ ಇಂಡಿಯಾ ತಂಡವನ್ನು ಸೇರಿಕೊಂಡಿದ್ದರು. ಆದರೆ ಅಷ್ಟರಲ್ಲೇ ಕ್ರಿಕೆಟ್ ಗೆ ವಿದಾಯ ಘೋಷಿಸುವ ನಿರ್ಧಾರವನ್ನು...

Published On :
ಟೀಂ ಇಂಡಿಯಾದ ಎಡಗೈ ವೇಗಿ ಆಶಿಶ್ ನೆಹ್ರಾ ಇತ್ತೀಚೆಗಷ್ಟೇ ಟೀಂ ಇಂಡಿಯಾ ತಂಡವನ್ನು ಸೇರಿಕೊಂಡಿದ್ದರು. ಆದರೆ ಅಷ್ಟರಲ್ಲೇ ಕ್ರಿಕೆಟ್ ಗೆ ವಿದಾಯ ಘೋಷಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ದೂರ ಉಳಿದಿದ್ದ ಆಶಿಶ್ ನೆಹ್ರಾ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ತಂಡವನ್ನು ಸೇರಿಕೊಂಡಿದ್ದರು. ಸದ್ಯ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡುತ್ತಿರುವ ನೆಹ್ರಾ ತಮ್ಮ 18 ವರ್ಷಗಳ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಲಿದ್ದಾರೆ.
38 ವರ್ಷದ ಆಶಿಶ್ ನೆಹ್ರಾ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಿಂದ ವಿರಾಟ್ ಕೊಹ್ಲಿ ನಾಯಕತ್ವದವರೆಗೂ ನೆಹ್ರಾ ಟೀಂ ಇಂಡಿಯಾದಲ್ಲಿ ಆಡಿದ್ದಾರೆ. ಇನ್ನು ಪದೇ ಪದೇ ಗಾಯದ ಸಮಸ್ಯೆಗೆ ಗುರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರು ನಿವೃತ್ತಿ ಘೋಷಿಸಲು ತೀರ್ಮಾನಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಬಳಿಕ ತಮ್ಮ ನಿವೃತ್ತಿ ನಿರ್ಧಾರವನ್ನು ಘೋಷಿಸಲಿದ್ದಾರೆ.
1999ರ ಫೆಬ್ರವರಿ 24ರಂದು ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಟೀಂ ಇಂಡಿಯಾ ಪರ ಆಡುವ ಮೂಲಕ ನೆಹ್ರಾ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ್ದರು. ಟೆಸ್ಟ್ ನಲ್ಲಿ ಒಟ್ಟಾರೆ 17 ಪಂದ್ಯಗಳಲ್ಲಿ ಆಡಿದ್ದು 44 ವಿಕೆಟ್ ಗಳನ್ನು ಪಡೆದಿದ್ದಾರೆ.
2001ರ ಜೂನ್ 21ರಂದು ಜಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಏಕದಿನ ಪಂದ್ಯವನ್ನು ಆಡಿದ್ದರು. ಒಟ್ಟು 120 ಏಕದಿನ ಪಂದ್ಯಗಳನ್ನು ಆಡಿರುವ ನೆಹ್ರಾ 157 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 25 ಟಿ20 ಪಂದ್ಯಗಳನ್ನು ಆಡಿರುವ ಅವರು 34 ವಿಕೆಟ್ ಗಳನ್ನು ಪಡೆದಿದ್ದಾರೆ. ಆಸ್ಟ್ರೇಲಿಯಾ ಸರಣಿ ನೆಹ್ರಾರ ಅಂತಿಮ ಸರಣಿಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


