ಆಸ್ಟ್ರೇಲಿಯಾ ವಿರುದ್ಧ ಸೋಲಿಗೆ ವೇಗಿ ಭುವನೇಶ್ವರ್ ಕುಮಾರ್ ಕೊಟ್ಟ ಕಾರಣ!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಸೋಲು ಅನುಭವಿಸಿದ್ದು ಸೋಲಿಗೆ ವೇಗಿ ಭುವನೇಶ್ವರ್ ಕುಮಾರ್ ಈ ರೀತಿ ವಿಶ್ಲೇಷಿಸಿದ್ದಾರೆ...

Published On :
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಸೋಲು ಅನುಭವಿಸಿದ್ದು ಸೋಲಿಗೆ ವೇಗಿ ಭುವನೇಶ್ವರ್ ಕುಮಾರ್ ಈ ರೀತಿ ವಿಶ್ಲೇಷಿಸಿದ್ದಾರೆ.
ಆರಂಭಿಕವಾಗಿ ಎರಡು ವಿಕೆಟ್ ಗಳನ್ನು ಬೇಗನೆ ಕೀಳುವಲ್ಲಿ ಯಶಸ್ವಿಯಾಗಿದ್ದ ಟೀಂ ಇಂಡಿಯಾ ಬೌಲರ್ ಗಳು ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಗಳನ್ನು ಬೀಳಿಸಲು ಸಾಧ್ಯವಾಗದೇ ಇರುವುದೇ ತಂಡ ಸೋಲಿಗೆ ಕಾರಣ ಎಂದು ಭುವನೇಶ್ವರ್ ಕುಮಾರ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ಬ್ಯಾಟಿಂಗ್ ವೈಪಲ್ಯದಿಂದಾಗಿ 118 ರನ್ ಗಳಿಗೆ ಆಲೌಟ್ ಆಗಿತ್ತು. ಆಸೀಸ್ ವೇಗಿ ಬೆಹ್ರೆನ್ ಡ್ರೊಫ್ ದಾಳಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಪೆವಿಲಿಯನ್ ಸೇರಿದರು.
ಗುವಾಹತಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 119 ರನ್ ಗಳ ಅಲ್ಪಗುರಿಯನ್ನು ಆಸ್ಟ್ರೇಲಿಯಾ ತಂಡ ಕೇವಲ 2 ವಿಕೆಟ್ ಕಳೆದುಕೊಂಡು, ಇನ್ನೂ 27 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದು ಹೈದರಾಬಾದ್ ನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಗೆದ್ದವರಿಗೆ ಸರಣಿ ಕೈವಶವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


