ಕ್ರಿಕೆಟ್

3ನೇ ಟಿ20 ಪಂದ್ಯದಿಂದ ಎಂಎಸ್ ಧೋನಿ ಹೊರಗಿಡಿ: ಅಜಿತ್ ಅಗರ್ಕರ್

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹೊರಗಿಡಿ ಎಂದು ಮಾಜಿ ಆಟಗಾರ...

3ನೇ ಟಿ20 ಪಂದ್ಯದಿಂದ ಎಂಎಸ್ ಧೋನಿ ಹೊರಗಿಡಿ: ಅಜಿತ್ ಅಗರ್ಕರ್
ಎಂಎಸ್ ಧೋನಿ
Published On :
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹೊರಗಿಡಿ ಎಂದು ಮಾಜಿ ಆಟಗಾರ ಅಜಿತ್ ಅಗರ್ಕರ್ ಹೇಳಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಧೋನಿ ಬದಲಿಗೆ ದಿನೇಶ್ ಕಾರ್ತಿಕ್ ಗೆ ಆಡಲು ಅವಕಾಶ ಕೊಡಬೇಕು. ಕಾರ್ತಿಕ್ ಉತ್ತಮ ಫಾರ್ಮ್ ನಲ್ಲಿದ್ದು ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟ ಆಡುತ್ತಾರೆ ಎಂದು ಹೇಳಿದರು. 
36 ವರ್ಷದ ಧೋನಿ ಕೆಲ ತಿಂಗಳುಗಳಿಂದ ಉತ್ತಮ ಫಾರ್ಮ್ ನಲ್ಲಿಲ್ಲ. ಹೀಗಾಗಿ ಅವರ ಜಾಗಕ್ಕೆ ದಿನೇಶ್ ಕಾರ್ತಿಕ್ ಅವರನ್ನು ಆಡಿಸಬೇಕು ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಸಲಹೆ ನೀಡಿದ್ದಾರೆ. 
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯ ನಡೆಯಲಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು ಸರಣಿ ಗೆಲುವಿಗಾಗಿ ಉಭಯ ತಂಡಗಳು ಗೆಲುವಿಗಾಗಿ ಕಾತರಿಸುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.