ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಕುಸಿದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ
ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಶುಕ್ರವಾರ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ...

Published On :
ನವದೆಹಲಿ: ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಶುಕ್ರವಾರ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತದ ವೇಗಿ ಜಸ್ಪ್ರೀತ್ ಬಮ್ರಾ ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಕೇಟಗರಿಯಲ್ಲಿ ಕೆಳಕ್ಕೆ ಕುಸಿದಿದ್ದಾರೆ.
ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಎಬಿ ಡಿ ವಿಲ್ಲಿಯರ್ಸ್ ಅವರು ಐಸಿಸಿ ಏಕದಿನ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 879 ರೇಟಿಂಗ್ ಪಾಯಿಂಟ್ಸ್‌ಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ಮೊದಲ ಸ್ಛಾನಕ್ಕೇರಿದ್ದಾರೆ. ಭಾರತದ ವಿರಾಟ್ ಕೊಹ್ಲಿ (877), ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (865) ಪಾಯಿಂಟ್ಸ್‌ಗಳನ್ನು ಹೊಂದಿದ್ದು, ಎರಡು ಹಾಗೂ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿ ಶರ್ಮಾ ಅವರು ಸಹ ಐಸಿಸಿ ರ್ಯಾಂಕಿಂಗ್ ನಲ್ಲಿ ಹಿನ್ನಡೆ ಅನುಭವಿಸಿದ್ದು, ಐದನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇನ್ನು ಬೌಲಿಂಗ್ ರ್ಯಾಂಕಿಂಗ್ ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಅವರು 671 ಪಾಯಿಂಟ್ಸ್ ಪಡೆಯುವ ಮೂಲಕ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಐಸಿಸಿ ಬಿಡುಗಡೆ ಮಾಡಿರುವ ನೂತನ ರ‍್ಯಾಂಕಿಂಗ್‌ನಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ದ.ಆಫ್ರಿಕಾ ತಂಡ ಆಗ್ರ ಸ್ಥಾನದಲ್ಲಿದೆ. ಜತೆಗೆ, ನೂತನ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದ.ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್ಸ್ ಎಬಿ ಡಿವಿಲಿಯರ್ಸ್ ಆಗ್ರ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


