ಕ್ರಿಕೆಟ್

ಮುಂಬರುವ ಸಾಗರೋತ್ತರ ಪ್ರವಾಸಗಳಿಗಾಗಿ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳಿಗೆ ವಿಶ್ರಾಂತಿ: ಕೊಹ್ಲಿ

ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲುವಿನ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಭರ್ಜರಿ ಫಾರ್ಮ್ ನಲ್ಲಿದ್ದು...

ಮುಂಬರುವ ಸಾಗರೋತ್ತರ ಪ್ರವಾಸಗಳಿಗಾಗಿ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳಿಗೆ ವಿಶ್ರಾಂತಿ: ಕೊಹ್ಲಿ
ವಿರಾಟ್ ಕೊಹ್ಲಿ
Published On :
ಮುಂಬೈ: ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲುವಿನ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಭರ್ಜರಿ ಫಾರ್ಮ್ ನಲ್ಲಿದ್ದು, ನಾಳೆಯಿಂದ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಪ್ರಾರಂಭವಾಗಲಿದೆ. 
ಇನ್ನು ಜನವರಿಯಿಂದ ಸಾಗರೋತ್ತರ ದೇಶಗಳ ನಡುವೆ ಕ್ರಿಕೆಟ್ ಸರಣಿಗಳು ನಡೆಯುವುದರಿಂದ ತಂಡದಲ್ಲಿರುವ ಮುಖ್ಯ ಬ್ಯಾಟ್ಸ್ ಮನ್ ಗಳಿಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡಲಾಗುವುದು ಎಂದು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಭಾರತ ತಂಡ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಆಫ್ರಿಕಾ ವಿರುದ್ಧ ಮೂರು ಟೆಸ್ಟ್, ಆರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದ್ದು ನಂತರ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ತಂಡ ಐದು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ ಈ ಹಿನ್ನೆಲೆಯಲ್ಲಿ ತಂಡದ ಪ್ರಮುಖ ಬ್ಯಾಟ್ಸ್ ಮನ್ ಹಾಗೂ ಬೌಲರ್ ಗಳಿಗೆ ವಿಶ್ರಾಂತಿ ನೀಡಲು ನಿರ್ವಾಹಕ ಮಂಡಳಿ ತೀರ್ಮಾನಿಸಿದೆ ಎಂದು ಕೊಹ್ಲಿ ಹೇಳಿದ್ದಾರೆ. 
ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಯಾವುದೇ ಪಂದ್ಯಗಳನ್ನು ಆಡಿಲ್ಲ. ಹೀಗಾಗಿ ತಂಡದಲ್ಲಿ ಬದಲಾವಣೆಗಳನ್ನು ಮಾಡುವುದು ತುಂಬ ಮಹತ್ವ ಪಡೆದುಕೊಳ್ಳುತ್ತದೆ. ಇನ್ನು ತಂಡದಲ್ಲಿನ ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ನೀಡಲು ಈ ಬದಲಾವಣೆ ಅತೀ ಮುಖ್ಯವಾಗಿದೆ. ತಂಡದಲ್ಲಿ ವೇಗಿಗಳಾದ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಅವರನ್ನು ತಾಜಾವಾಗಿಡಲು ಬಯಸುತ್ತೇವೆ. ಇನ್ನು ಪದೇ ಪದೇ ಆಟಗಾರರನ್ನು ಬದಲಾಯಿಸಲು ಬಯಸುವುದಿಲ್ಲ. ಈ ಕುರಿತಾಗಿ ನಾವು ಈಗಾಗಲೇ ಮಾತನಾಡಿದ್ದೇವೆ ಎಂದು ಕೊಹ್ಲಿ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.