ಬೌಂಡರಿಯಲ್ಲಿ ಬಾಲ್ ಬಾಯ್ ಅದ್ಭುತ ಕ್ಯಾಚ್ಗೆ ಪ್ರೇಕ್ಷಕರು ಫಿದಾ!
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯ ಮುಂಬೈನಲ್ಲಿ ನಡೆಯುತ್ತಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಡಿಸಿದ ಸಿಕ್ಸರ್...

Published On :
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯ ಮುಂಬೈನಲ್ಲಿ ನಡೆಯುತ್ತಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಡಿಸಿದ ಸಿಕ್ಸರ್ ಅನ್ನು ಬೌಂಡರಿಯಲ್ಲಿ ಬಾಲ್ ಬಾಯ್ ಅದ್ಭುತವಾಗಿ ಕ್ಯಾಚ್ ಹಿಡಿಯುವ ಮೂಲಕ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದರು.
ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ನಾಯಕ ವಿರಾಟ್ ಕೊಹ್ಲಿ 41 ರನ್ ಗಳಿಸಿದ್ದಾಗ ಆ್ಯಡಮ್ ಮಿಲ್ನೆ ಎಸೆತವನ್ನು ಸಿಕ್ಸರ್ ಸಿಡಿಸಿದರು. ಈ ವೇಳೆ ಬೌಂಡರಿಯಲ್ಲಿ ಬಾಲ್ ಬಾಯ್ ಅದ್ಭುತವಾಗಿ ಜಿಗಿದು ಒಂದೇ ಕೈನಲ್ಲಿ ಕ್ಯಾಚ್ ಅನ್ನು ಹಿಡಿದರು. ಈ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಜೋರಾಗಿ ಕೂಗುತ್ತಾ ಕರತಾಂಡವ ಮಾಡಿದರು.
ಇನ್ನು ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ಬಾಲ್ ಬಾಯ್ ಹರ್ಷ ವ್ಯಕ್ತಪಡಿಸುತ್ತಾ ಬೌಂಡರಿ ಗೆರೆ ಬಳಿ ನಿಂತು ಸಂತೋಷದಿಂದ ಪ್ರೇಕ್ಷಕರನ್ನು ನೋಡುತ್ತಾ ಕುಳಿತ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್ಟೀಂ ಇಂಡಿಯಾTeam IndiaNew ZealandVirat Kohliವಿರಾಟ್ ಕೊಹ್ಲಿನ್ಯೂಜಿಲೆಂಡ್Cricket OffbeatBall Boyಬಾಲ್ ಬಾಯ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


