ಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆಲುವು
ರಾಸ್ ಟೇಲರ್ ಹಾಗೂ ಟಾಮ್ ಲಾಥಮ್ ಅಮೋಘ ಜೊತೆಯಾಟದ ನೆರವಿನಿಂದ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ತನ್ನದಾಗಿಸಿಕೊಂಡಿತು.

ಮುಂಬೈ: ರಾಸ್ ಟೇಲರ್ ಹಾಗೂ ಟಾಮ್ ಲಾಥಮ್ ಅಮೋಘ ಜೊತೆಯಾಟದ ನೆರವಿನಿಂದ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ತನ್ನದಾಗಿಸಿಕೊಂಡಿತು.
ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 281 ರನ್ ಗೆಲುವಿನ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ರಾಸ್ ಟೇಲರ್(95ರನ್) ಮತ್ತು ಟಾಮ್ ಲಾಥಮ್(103 ರನ್) ಅವರ ಮೂರನೇ ವಿಕೆಟ್ ಜತೆಯಾಟದ ನೆರವಿನಿಂದ ಗೆಲುವು ಸಾಧಿಸಿತು.
ನ್ಯೂಜಿಲೆಂಡ್ 80 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಆದರೆ, ನಂತರ ಲಥಾಮ್ ಹಾಗೂ ಟೇಲರ್ ಭಾರತದ ಬೌಲರ್‌ಗಳಿಗೆ ದಿಟ್ಟ ಉತ್ತರ ನೀಡಿದರು. ಟೇಲರ್ 48ನೇ ಓವರ್‌ನಲ್ಲಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


