ಶ್ರೀಲಂಕಾ ವಿರುದ್ಧದ 3 ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ!
ಡಿಸೆಂಬರ್ ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಜತೆ ಮದುವೆಯಾಗಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ...

Published On :
ನವದೆಹಲಿ: ಡಿಸೆಂಬರ್ ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಜತೆ ಮದುವೆಯಾಗಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರದಾಸ್ ಅವರು ಕೊಹ್ಲಿ ಮೂರು ಟೆಸ್ಟ್ ಪಂದ್ಯಗಳಲ್ಲೂ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟಿ20 ಹಾಗೂ ಶ್ರೀಲಂಕಾ ವಿರುದ್ಧದ ಮೊದಲೆರಡು ಟೆಸ್ಟ್ ಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿತ್ತು. ಈ ಸಂದರ್ಭದಲ್ಲಿ 3ನೇ ಟೆಸ್ಟ್ ವೇಳೆ ಕೊಹ್ಲಿಗೆ ವಿಶ್ರಾಂತಿ ನೀಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿತ್ತು.
ಈ ಕುರಿತು ಸ್ಫಷ್ಟನೆ ನೀಡಿರುವ ಪ್ರಸಾದ್ 3ನೇ ಟೆಸ್ಟ್ ಗೂ ಕೊಹ್ಲಿಗೆ ನಾಯಕರಾಗಿರಲಿದ್ದಾರೆ. ಅವರಿಗೂ ವಿಶ್ರಾಂತಿಯ ಅವಶ್ಯವಿದ್ದು ಟೆಸ್ಟ್ ಸರಣಿ ಮುಕ್ತಾಯಗೊಂಡ ಬಳಿಕ ಆ ಕುರಿತು ಚಿಂತನೆ ನಡೆಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaSri Lankaಶ್ರೀಲಂಕಾVirat Kohliವಿರಾಟ್ ಕೊಹ್ಲಿMSK Prasadಎಂಎಸ್ಕೆ ಪ್ರಸಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


