ವೇಗವಾಗಿ 9 ಸಾವಿರ ರನ್ ಸಿಡಿಸಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ...

Published On :
ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ.
ಕಾನ್ಪುರ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಇನ್ನು ಇದೇ ಪಂದ್ಯದಲ್ಲಿ ವೇಗವಾಗಿ 9 ಸಾವಿರ ರನ್ ಸಿಡಿಸಿ ಅಗ್ರ ಆಟಗಾರ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.
202 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 55.95ರ ಬ್ಯಾಟಿಂಗ್ ಸರಾಸರಿಯಲ್ಲಿ 9000 ರನ್ ಸಿಡಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ವೇಗವಾಗಿ 32ನೇ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ. ಇನ್ನು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 300 ಪಂದ್ಯಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


