ಬುಮ್ರಾ, ಭುವನೇಶ್ವರ್ ವಿಶ್ವದ ಅತ್ಯುತ್ತಮ ಡೆತ್ ಬೌಲರ್ಸ್: ರೋಹಿತ್ ಶರ್ಮಾ
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ...

Published On :
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಜಸ್ ಪ್ರೀತ್ ಬುಮ್ರಾ ಮತ್ತು ಭುವನೇಶ್ವರು ಕುಮಾರ್ ಅವರನ್ನು ಹಿರಿಯ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಗೆಲುವಿಗೆ ಜಸ್ ಪ್ರೀತ್ ಬುಮ್ರಾ ಮತ್ತು ಭುವನೇಶ್ವರು ಕುಮಾರ್ ಡೆತ್ ಓವರ್ ನಲ್ಲಿ ನೀಡಿದ ಅತ್ಯುತ್ತಮ ಪ್ರದರ್ಶನವೇ ಕಾರಣವಾಗಿದ್ದು ಈ ಇಬ್ಬರು ವಿಶ್ವದ ಅತ್ಯುತ್ತಮ ಡೆತ್ ಬೌಲರ್ಸ್ ಎಂದು ರೋಹಿತ್ ಶರ್ಮಾ ಹೊಗಳಿದ್ದಾರೆ.
ಹೌದು ನಿನ್ನೆಯ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದ ಹೊರತಾಗಿಯೂ ಸೋಲಿನ ದವಡೆಗೆ ಸಿಲುಕಿತ್ತು. ನ್ಯೂಜಿಲೆಂಡ್ ಇನ್ನಿಂಗ್ಸ್ 46ನೇ ಓವರ್ ನವರೆಗೂ ಭಾರತ ಸೋಲುವುದು ಖಚಿತ ಎಂದು ಹೇಳಲಾಗಿತ್ತು. ಆದರೆ 47ನೇ ಓವರ್ ನಲ್ಲಿ ಭುವನೇಶ್ವರ್ ಕುಮಾರ್ ಭರ್ಜರಿಯಾಗಿ ಆಡುತ್ತಿದ್ದ ನಿಕೋಲ್ಸ್ ರನ್ನು ಬೌಲ್ಡ್ ಮಾಡಿ ತಂಡಕ್ಕೆ ಗೆಲುವಿನ ಆಶಾವಾದ ತಂದುಕೊಟ್ಟರು.
ನಂತರ 48ನೇ ಓವರ್ ನಲ್ಲಿ ಎಂಎಸ್ ಧೋನಿ ಮತ್ತು ವೇಗಿ ಬುಮ್ರಾರ ಸಮಯೋಚಿತ ರನೌಟ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತ್ತು. ಹೀಗೆ ಡೆತ್ ಓವರ್ ನಲ್ಲಿ ಈ ಇಬ್ಬರು ಆಟಗಾರರು ಉತ್ತಮವಾಗಿ ಬೌಲ್ ಮಾಡುವ ಮೂಲಕ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಲು ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ ಕೊಡುಗೆಯು ಸಹ ಅಪಾರ. ಪಂದ್ಯದಲ್ಲಿ 138 ಎಸೆತಗಳನ್ನು ಎದುರಿಸಿದ್ದ ರೋಹಿತ್ ಶರ್ಮಾ 2 ಸಿಕ್ಸರ್ 18 ಬೌಂಡರಿ ಸೇರಿದಂತೆ 147 ರನ್ ಪೇರಿಸಿದ್ದರು. ಉತ್ತಮ ಪ್ರದರ್ಶನಕ್ಕಾಗಿ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaRohit Sharmaರೋಹಿತ್ ಶರ್ಮಾBhuvneshwar KumarJasprit Bumrahಭುವನೇಶ್ವರ್ ಕುಮಾರ್ಜಸ್ ಪ್ರೀತ್ ಬುಮ್ರಾDeath bowlersಡೆತ್ ಬೌಲರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


