ನೆಹ್ರಾ ವಿದಾಯಕ್ಕೆ ಟೀಂ ಇಂಡಿಯಾದ ಗೆಲುವಿನ ಉಡುಗೊರೆ
ಹಿರಿಯ ಆಟಗಾರ ಆಶೀಶ್ ನೆಹ್ರಾ ಅವರ ವಿದಾಯದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಗೆಲುವಿನ ಉಡುಗೊರೆ ನೀಡಿದೆ.

Published On :
ನವದೆಹಲಿ: ಹಿರಿಯ ಆಟಗಾರ ಆಶೀಶ್ ನೆಹ್ರಾ ಅವರ ವಿದಾಯದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಗೆಲುವಿನ ಉಡುಗೊರೆ ನೀಡಿದೆ.
ದೆಹಲಿ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಇಂದು ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ 53 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಭಾರತ ನೀಡಿದ್ದ 203 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಕಿವೀಸ್ ಪಡೆ, 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಭಾರತದ ಎದುರು 53 ರನ್ ಗಳ ಪರಾಭವಗೊಂಡಿತು.
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಪಾರಮ್ಯ ಸಾಧಿಸಿದ ಭಾರತ ತಂಡ ಇಂದು ಅರ್ಹವಾಗಿಯೇ ಜಯ ಸಾಧಿಸಿತು. ಆದರೆ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಂಕಾದಂತೆ ಕಂಡುಬಂದ ನ್ಯೂಜಿಲೆಂಡ್ ತಂಡ ಯಾವುದೇ ಹಂತದಲ್ಲೂ ಟೀಂ ಇಂಡಿಯಾಗೆ ತಿರುಗಿ ಬೀಳುವ ಪ್ರಯತ್ನ ಮಾಡಲಿಲ್ಲ. ಕಿವೀಸ್ ಪರ ಲಾಥಮ್ ಗಳಿಸಿದ 39 ರನ್ ಗಳೇ ವೈಯುಕ್ತಿಕ ಗರಿಷ್ಠ ರನ್ ಆಗಿತ್ತು ಎಂದರೆ ಅವರ ಬ್ಯಾಟಿಂಗ್ ಎಷ್ಟು ಕಳಪೆಯಾಗಿತ್ತು ಎನ್ನುವುದನ್ನು ಊಹಿಸಬೇಹುದು. ಆರಂಭಿಕ ಆಟಗಾರರೂ ಸೇರಿದಂತೆ ತಂಡದ ಬರೊಬ್ಬರಿ 6 ಮಂದಿ ಆಟಗಾರರು ಒಂದಂಕಿಗೆ ಔಟ್ ಆಗಿದ್ದು ತಂಡಕ್ಕೆ ಮುಳುವಾಯಿತು.ನಾಯಕ ಕೇನ್ ವಿಲಿಯಮ್ಸನ್ ಹಾಗೂ ಲಾಥಮ್ ಕೊಂಚ ಪ್ರತಿರೋಧ ಒಡ್ಡಿದರಾದರೂ ಅವರ ಆಟ ಹೆಚ್ಚು ಹೊತ್ತು ನಡೆಯಲಿಲ್ಲ.
ಬಳಿಕ ಇನ್ನಿಂಗ್ಸ್ ನ ಕೊನೆಯಲ್ಲಿ ಸ್ಯಾಂಥನರ್ ಕ್ರೀಸ್ ನಲ್ಲಿ ಗಟ್ಟಿಯಾಗಿ ನಿಂತು ಆಡುವ ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ತಂಡಕ್ಕೆ ಗೆಲುವು ತಂದು ಕೊಡಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಭಾರತ ತಂಡ 3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiಭಾರತ ವರ್ಸಸ್ ನ್ಯೂಜಿಲೆಂಡ್Ashish NehraIndia vs New Zealandಆಶಿಶ್ ನೆಹ್ರಾಮೊದಲ ಟಿ201st T20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


