ಕ್ರಿಕೆಟ್

1ನೇ ಟಿ20 ಪಂದ್ಯ: ನ್ಯೂಜಿಲೆಂಡ್‌ಗೆ 203 ರನ್‍ಗಳ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ...

1ನೇ ಟಿ20 ಪಂದ್ಯ: ನ್ಯೂಜಿಲೆಂಡ್‌ಗೆ 203 ರನ್‍ಗಳ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ
ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ
Published On :
ನವದೆಹಲಿ: ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ. 
ದೆಹಲಿಯಾ ಫಿರೋಜ್ ಷಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ಆರಂಭಿಕ ಆಟಗಾರರ ಭರ್ಜರಿ ಬ್ಯಾಟಿಂಗ್ ನಿಂದಾಗಿ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದ್ದು ನ್ಯೂಜಿಲೆಂಡ್ ಗೆ ಗೆಲ್ಲಲು 203 ರನ್‍ಗಳ ಗುರಿ ನೀಡಿದೆ. 
ಆರಂಭಿಕ ಆಟಗಾರರಾದ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಶತಕದ ಜತೆಯಾಟ ನೀಡಿದರು. ಧವನ್ 52 ಎಸೆತಗಳಲ್ಲಿ 2 ಸಿಕ್ಸರ್ 10 ಬೌಂಡರಿ ಸೇರಿದಂತೆ 80 ರನ್ ಗಳಿಸಿ ಔಟಾದರೇ ರೋಹಿತ್ ಶರ್ಮಾ 55 ಎಸೆತಗಳಲ್ಲಿ 4 ಸಿಕ್ಸರ್ 6 ಬೌಂಡರಿ ಸೇರಿದಂತೆ 80 ರನ್ ಗಳಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಶೂನ್ಯಕ್ಕೆ ಔಟಾದರು. ನಾಯಕ ವಿರಾಟ್ ಕೊಹ್ಲಿ ಅಜೇಯ 26 ಹಾಗೂ ಎಂಎಸ್ ಧೋನಿ ಅಜೇಯ 7 ರನ್ ಗಳಿಸಿದ್ದಾರೆ. 
ನ್ಯೂಜಿಲೆಂಡ್ ಪರ ಇಶ್ ಸೋಧಿ 2, ಬೋಲ್ಟ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.